ನವದೆಹಲಿ:ದೇಶದಾದ್ಯಂತ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇದಿನೆ ಭಾರೀ ಪ್ರಮಾಣದ ಏರಿಕೆ ಕಾಣುತ್ತಿದೆ. ನವದೆಹಲಿ ಸೇರಿ ಅನೇಕ ರಾಜ್ಯಗಳಲ್ಲಿ ಆಕ್ಸಿಜನ್​ ಕೊರತೆ ಕಂಡುಬಂದಿದ್ದು, ಈ ವಿಚಾರವಾಗಿ ದೆಹಲಿ ಹೈ ಕೋರ್ಟ್​ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ದೆಹಲಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್​ ಕೊರತೆ ಉಂಟಾಗಿರುವ ಕುರಿತಾಗಿ ಮ್ಯಾಕ್ಸ್​ ಗ್ರೂಪ್​ ಹೈ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ಮಾಡಿದ ನ್ಯಾಯಾಲಯ ಕೇಂದ್ರವನ್ನು ಪ್ರಶ್ನಿಸಿದೆ. ದೇಶದ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್​ ಪೂರೈಕೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಹೀಗಿರುವಾಗ ಸರ್ಕಾರ ಇಷ್ಟೊಂದು ಅಸಡ್ಡೆ ಏಕಾಗಿ ತೋರಿಸುತ್ತಿದೆ? ಜನರ ಜೀವದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎನ್ನುವುದನ್ನು ಇದು ತೋರಿಸುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಇಂಟಸ್ಟ್ರಿಗಳ ಆಕ್ಸಿಜನ್​ ಬಳಕೆ ಮಾಡಿಕೊಳ್ಳುವ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ನ್ಯಾಯಾಲಯ ಈಗಾಗಲೇ ಸರ್ಕಾರಕ್ಕೆ ಸೂಚಿಸಿದೆ. ಆ ಬಗ್ಗೆ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಇಂದು ಪ್ರಶ್ನಿಸಲಾಗಿದೆ. ಪೇಪರ್​ ವರ್ಕ್​ ನಡೆಸುತ್ತಿರುವುದಾಗಿ ಸರ್ಕಾರ ತಿಳಿಸಿದ್ದು, ಅದಕ್ಕೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಎಲ್ಲ ಇಂಡಸ್ಟ್ರಿಗಳು ಸಹಾಯ ಹಸ್ತ ಚಾಚಲು ಸಿದ್ಧಯಿವೆ. ನಿಮ್ಮದೇ ಸರ್ಕಾರವಿರುವ ರಾಜ್ಯಗಳಲ್ಲಿ ಪೆಟ್ರೋಲಿಯಂ ಸಂಸ್ಥೆಗಳಿವೆ. ಹಾಗಿದ್ದರೂ ಆಕ್ಸಿಜನ್​ ಪಡೆಯಲು ಇಷ್ಟು ಸಮಯ ಬೇಕೇ? ಎಂದು ನ್ಯಾಯಾಲಯ ಕೇಳಿದೆ.
ಪ್ರತಿಯೊಬ್ಬ ಮನುಷ್ಯನಿಗೆ ಆಕ್ಸಿಜನ್​ ನೀಡುವುದು ಸರ್ಕಾರದ ಕೆಲಸ. ಹಾಗೆ ಮಾಡದಿದ್ದರೆ ಮನುಷ್ಯನ ಜೀವಿಸುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಎಲ್ಲ ಇಂಡಸ್ಟ್ರಿಗಳಿಂದ ಸಂಪೂರ್ಣವಾಗಿ ಆಕ್ಸಿಜನ್​ ಪಡೆದಾದರೂ ಜನರ ಜೀವ ರಕ್ಷಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಲಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × five =
Remember me
