ನವದೆಹಲಿ:ಈ ತಕ್ಷಣದಿಂದಲೇ ಶಾಲಾ ವಿದ್ಯಾರ್ಥಿಗಳ ಆನ್​ಲೈನ್​ ಮತ್ತು ಸೆಮಿ ಆನ್​ಲೈನ್​ ತರಗತಿಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿ ನವದೆಹಲಿಯ ಶಿಕ್ಷಣ ನಿರ್ದೇಶನಾಲಯ ಆದೇಶ ಹೊರಡಿಸಿದೆ. ಏಪ್ರಿಲ್​ 20ರಿಂದಲೇ ಬೇಸಿಗೆ ರಜೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ತರಗತಿ ನಿಲ್ಲಿಸುವಂತೆ ಹೇಳಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚಲಾರಂಭಿಸಿದೆ. ಆ ಹಿನ್ನೆಲೆಯಲ್ಲಿ ಶಾಲೆಗಳ ಬೇಸಿಗೆ ರಜೆಯನ್ನು ಮೇ 11ರ ಬದಲಾಗಿ ಏಪ್ರಿಲ್​ 20ರಿಂದಲೇ ಆರಂಭಿಸುತ್ತಿರುವುದಾಗಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಜೂನ್​ 9ರವರೆಗೆ ಬೇಸಿಗೆ ರಜೆ ಇರಲಿದೆ. ಈ ಸಮಯದಲ್ಲಿ ಶಾಲೆಗಳು ಕೇವಲ ಬೇಸಿಗೆ ರಜೆ ಸಂಬಂಧಿಸಿದ ಚಟುವಟಿಕೆಗಳನ್ನು ಮಾತ್ರವೇ ವಿದ್ಯಾರ್ಥಿಗಳಿಂದ ಮಾಡಿಸಬೇಕು. ಬೇರೆ ತರಗತಿಗಳನ್ನು ತಕ್ಷಣ ನಿಲ್ಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ನವದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್​ 19ರಿಂದ 26ರವರೆಗೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಉಳಿದಂತೆ ಬೇರೆ ರಾಜ್ಯಗಳಲ್ಲೂ ಸೋಂಕು ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. (ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 10 =
Remember me
