ಮುಂಬೈ:ಭಾರತ ಚಿತ್ರರಂಗದ ಹಿರಿಯ ನಟಿ ಮಾಧುರಿ ದೀಕ್ಷಿತ್​ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದು, ಈ ಪಕ್ಷದಿಂದಲೇ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂದು  ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.
ಬಾಲಿವುಡ್​ನ ಜನಪ್ರಿಯ ತಾರೆ ಮಾಧುರಿ ದೀಕ್ಷಿತ್​ಗೆ ಬಿಜೆಪಿ ಈ ಬಾರಿಯ ಲೋಕಸಭೆ ಚುನಾವಣೆ ಟಿಕೆಟ್ ನೀಡಲಿದೆ ಎನ್ನಲಾಗುತ್ತಿದೆ. ಮಾಧುರಿ ದೀಕ್ಷಿತ್ ಪುಣೆಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ಮುಗಿದಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ಮಾಧುರಿ ದೀಕ್ಷಿತ್ ಮೈದಾನದಲ್ಲಿದ್ದರು. ಇದೇ ವೇಳೆ ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಕಾಣಿಸಿಕೊಂಡರು. ಅವರೊಂದಿಗೆ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಕೂಡ ಇದ್ದರು. ಅಷ್ಟೇ ಅಲ್ಲ, ಬಿಜೆಪಿ ಮುಖಂಡ ಆಶಿಶ್ ಶೇಲಾರ್ ಕೂಡ ಅಲ್ಲಿದ್ದರು. ಇದಾದ ನಂತರ ಮಾಧುರಿ ದೀಕ್ಷಿತ್ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿ ಬಂದವು.
ಇದನ್ನೂ ಓದಿ:ವಿಶ್ವಕಪ್​ನಲ್ಲಿ ಭಾರತ ಆಡಿರುವ ಪ್ರತಿಯೊಂದು ಪಂದ್ಯದ್ಲಲು ಫಿಕ್ಸಿಂಗ್​ ನಡೆದಿದೆ ಎಂದ ಪಾಕ್ ಮಾಜಿ ಕ್ರಿಕೆಟಿಗ; ವ್ಯಾಪಕ ಟೀಕೆಗೆ ಗುರಿ
ಅಂದಹಾಗೆ, ಮಾಧುರಿ ದೀಕ್ಷಿತ್​ಗೆ ಬಿಜೆಪಿ ಟಿಕೆಟ್ ನೀಡುವ ಯತ್ನ ಮಾಡುತ್ತಿರುವುದು ಇದು ಮೊದಲೇನೂ ಅಲ್ಲ. 2019ರ ಲೋಕಸಭೆ ಚುನಾವಣೆ ಸಮಯದಲ್ಲಿಯೂ ಈ ಸುದ್ದಿ ಹರಿದಾಡಿತ್ತು. ಲೋಕಸಭೆ ಚುನಾವಣೆಗೆ ಮುನ್ನ ಮಾಧುರಿ ದೀಕ್ಷಿತ್ ಹಾಗೂ ಅವರ ಪತಿ, ವೈದ್ಯ ನೇನೆ ಅವರುಗಳು ಆಗಿನ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಸಹ ಮಾಡಿದ್ದರು. ಆದರೆ ಆ ಸಮಯದಲ್ಲಿ ಮಾಧುರಿಗೆ ಟಿಕೆಟ್ ಸಿಕ್ಕಿರಲಿಲ್ಲ.
ಈ ಬಾರಿ ಮತ್ತೆ ಮಾಧುರಿಗೆ ಚುನಾವಣಾ ಟಿಕೆಟ್ ಅನ್ನು ಬಿಜೆಪಿ ನೀಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನಟಿ ಹೇಮಾ ಮಾಲಿನಿ, ನಟ ಸನ್ನಿ ಡಿಯೋಲ್, ಸ್ಮೃತಿ ಇರಾನಿ, ನಟ ರವಿ ಕಿಶನ್, ಕಿರಣ್ ಖೇರ್, ಕನ್ನಡತಿ ಸುಮಲತಾ, ಪರೇಶ್ ರಾವಲ್ ಇನ್ನೂ ಕೆಲವು ಜನಪ್ರಿಯ ನಟ-ನಟಿಯರು ಬಿಜೆಪಿ ಸೇರಿ ಸಂಸದರಾಗಿದ್ದಾರೆ. ಕೆಲವರು ಮಂತ್ರಿಗಳು ಸಹ ಆಗಿದ್ದಾರೆ. ಮಾಧುರಿ ದೀಕ್ಷಿತ್​ಗೆ ದೊಡ್ಡ ಮಟ್ಟಿಗಿನ ಜನಪ್ರಿಯತೆ ಇದ್ದು, ಸೂಕ್ತ ಕ್ಷೇತ್ರ ಆರಿಸಿ ಅವರ ಗೆಲುವು ಪಕ್ಕಾ ಎನ್ನಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 10 =
Remember me
