ರೇವಾ:ಮನೆಯ ಫ್ರೀಜ್​​ನಲ್ಲಿ ಇರಿಸಲಾಗಿದ್ದ ಮಹಿಳೆಯ ಶವವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.ಇದನ್ನೂ ಓದಿ:ಗ್ಯಾರಂಟಿ ಪರಿಣಾಮ ಆರು ತಿಂಗಳಲ್ಲಿ ತಿಳಿಯುತ್ತೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿಕೆಮೃತ ಮಹಿಳೆಯನ್ನು ಸುಮಿತ್ರಿ (40) ಎಂದು ಗುರುತಿಸಲಾಗಿದ್ದು, ಭಾನುವಾರದಂದು ಈ ಘಟನೆ ನಡೆದಿದೆ, ಮೃತ ಮಹಿಳೆಯ ಸಹೋದರ ಅಭಯ್ ತಿವಾರಿ, ತನ್ನ ಅಕ್ಕನ ಗಂಡ ಭರತ್ ಮಿಶ್ರಾ ಆಕೆಯನ್ನು ಹತ್ಯೆಗೈದು ಮೌನವಾಗಿ ಕುಳಿತಿದ್ದಾನೆ ಎಂದು ಆರೋಪಿಸಿದ್ದಾನೆ.ಆದರೆ ಭರತ್ ಮಿಶ್ರಾ ಈ ಆರೋಪವನ್ನು ತಳ್ಳಿ ಹಾಕಿದ್ದು, ತನ್ನ ಹೆಂಡತಿ ಕಾಮಾಲೆಯಿಂದ ಜೂನ್ 30ರಂದು ಸತ್ತಿದ್ದಳು. ಆಕೆಯ ಅಂತ್ಯಕ್ರಿಯೆಗಾಗಿ ತನ್ನ ಮಗ ಮುಂಬೈನಿಂದ ರೇವಾಗೆ ಬರಬೇಕಿತ್ತು. ಈ ಹಿನ್ನೆಲೆ ತಾನು ಆಕೆಯ ಮೃತದೇಹವನ್ನು ಫ್ರೀಜ್​ನಲ್ಲಿ ಇರಿಸಿದ್ದೆ ಎಂದು ಹೇಳಿದ್ದಾನೆ.ಇದನ್ನೂ ಓದಿ:ತೆರವಾಗದ ಆಕ್ರಮಿತ ಸರ್ಕಾರಿ ಜಾಗ: ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆರೋಪಈ ಕುರಿತು ಮಾತನಾಡಿದ ಪೊಲೀಸರು, ಮೃತ ಮಹಿಳೆಯ ಸಹೋದರನು ಆಕೆಯ ಪತಿಯ ಮೇಲೆ ಗಂಭೀರ ಆರೋಪವನ್ನು ಹೊರಿಸಿದ್ದು, ನಾವು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಈಗಾಗಲೇ ನಾವು ಮಹಿಳೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಸಾವಿನ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 9 =
Remember me
