ಭೋಪಾಲ್:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ನ ಸೆಮಿಫಿನಾಲೆ ಎಂದೇ ಬಿಂಬಿಸಲಾಗಿದೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಇಂದು (ನವೆಂಬರ್ 17) ಮತದಾನ ನಡೆಯುತ್ತಿದ್ದು, ಈ ವೇಳೆ ಕಲ್ಲುತೂರಾಟ ನಡೆದಿದೆ.
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ದಿಮಾನಿ ವಿಧಾನಸಭಾ ಕ್ಷೇತ್ರದ ಮಿರ್ಘಾನ್​ ಗ್ರಾಮದ ಮತಗಟ್ಟೆ 147 ಹಾಗೂ 148ರಲ್ಲಿ ಕಲ್ಲು ತೂರಾಟ ನಡೆದಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
#WATCH| Madhya Pradesh Elections | Violence reported at polling booths 147-148 of Dimani Assembly constituency, in Mirghan, Morena when stone pelting ensued between two sides. One person injured in stone pelting. The situation is now under control.pic.twitter.com/AeqFhuEUQp
ಇದನ್ನೂ ಓದಿ:ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ; 48 ದಿನ ಮಂಡಲೋತ್ಸವ: ಪೇಜಾವರ ಶ್ರೀ
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅನುರಾಗ್​ ಸುಜಾನಿಯಾ, ಯಾವ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಕಲ್ಲುತೂರಾಟವಾಯಿತು ಎಂದು ತಿಳಿದು ಬಂದಿಲ್ಲ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭಿರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದೆ. ಡಿಸೆಂಬರ್ 03ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
We got reports of violence at few places away from polling booths. These incidents haven't affected polling. We're probing videos of firing and have arrested few people in one such firing incident: SP Morena Anurag Sujaniya on violence during by-polls in Morena, Madhya Pradeshpic.twitter.com/1XYnnoDKYO
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
