ಝಬುವಾ:ಬಾಲಕಿಯರ ಹಾಸ್ಟೆಲ್​ಗೆ ಭೇಟಿ ನೀಡಿದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಿರುವ ಘಟನೆ ಮಧ್ಯಪ್ರದೇಶದ ಝಬುವಾ ಎಂಬಲ್ಲಿ ನಡೆದಿದೆ.ಅಧಿಕಾರಿಯನ್ನು ಸುನಿಲ್ ಕುಮಾರ್ ಝಾ ಎಂದು ಗುರುತಿಸಲಾಗಿದ್ದು, ಕಳೆದ ಭಾನುವಾರ ಬುಡಕಟ್ಟು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಯು ಬಾಲಕಿಯರಿಗೆ ಅನುಚಿತ ಮತ್ತು ಲೈಂಗಿಕ ಸಂಬಂಧಿತ ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೇ, ಕನಿಷ್ಠ ಮೂವರು ಹುಡುಗಿಯರನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಆರೋಪ ಮಾಡಲಾಗಿತ್ತು.ಇದನ್ನೂ ಓದಿ:VIDEO| ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ
ಘಟನೆಯ ನಂತರ ಹುಡುಗಿಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹಾಸ್ಟೆಲ್ ಸೂಪರಿಂಟೆಂಡೆಂಟ್ ಹೇಳಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ವರ್ಷಾ ಸೋಲಂಕಿ, ಈ ಬಗ್ಗೆ ತನಿಖೆ ನಡೆಸಿದ್ದು ಆರೋಪ ಸತ್ಯವಾಗಿದೆ. ತದ ನಂತರ ಜಿಲ್ಲಾಧಿಕಾರಿಗಳು ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಲು ವಿಭಾಗೀಯ ಆಯುಕ್ತರಿಗೆ ಶಿಫಾರಸು ಮಾಡುವುದರ ಜತೆಗೆ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಿದ್ದಾರೆ.ಪೋಕ್ಸೊ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಲೈಂಗಿಕ ಕಿರುಕುಳ, ಕಿರುಕುಳ ಮತ್ತು ಬೆದರಿಕೆಗೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮಂಗಳವಾರ ಬೆಳಿಗ್ಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಸುನೀಲ್​ರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
