ಚೆನ್ನೈ: “ಪವಿತ್ರ ಭೂಮಿ ಭಾರತ ಈಗ ಅತ್ಯಾಚಾರಿಗಳ ನಾಡಾಗಿದೆ. ಇಲ್ಲಿ ಪ್ರತಿ 15 ನಿಮಿಷಗಳಿಗೊಮ್ಮೆ ಅತ್ಯಾಚಾರ ನಡೆಯುತ್ತಿದೆ..” -ಇಂಥದ್ದೊಂದು ಅಭಿಪ್ರಾಯವನ್ನು ನ್ಯಾಯಾಲಯವೇ ವ್ಯಕ್ತಪಡಿಸಿದೆ. ಅತ್ಯಾಚಾರ ಪ್ರಕರಣವೊಂದರ ಕುರಿತಂತೆ ಮದ್ರಾಸ್​ ಹೈಕೋರ್ಟ್​ನಲ್ಲಿ ಗುರುವಾರ ನಡೆದ ವಿಚಾರಣೆ ವೇಳೆ ನ್ಯಾಯಾಧೀಶರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರ ಸಂತ್ರಸ್ತೆ, ಅಸ್ಸಾಮ್​ನಿಂದ ವಲಸೆ ಬಂದಿರುವ ಕೂಲಿ ಕಾರ್ಮಿಕೆಯ ಪ್ರಕರಣ ಸಂಬಂಧ ನ್ಯಾಯವಾದಿ ಎ.ಪಿ. ಸೂರ್ಯಪ್ರಕಾಶಂ ವಾದ ಮಂಡಿಸಿದ್ದರು. ಸಂತ್ರಸ್ತೆಗೆ ಆಶ್ರಯ ಒದಗಿಸಬೇಕು, ಡೆಪ್ಯುಟಿ ಇನ್​ಸ್ಪೆಕ್ಟರ್ ಜನರಲ್​ ನೇತೃತ್ವದ ತಂಡದ ಮೂಲಕ ಪ್ರಕರಣದ ತನಿಖೆ ನಡೆಸಬೇಕು ಎಂದು ಡಿಜಿಪಿ ಅವರಿಗೆ ಸೂಚಿಸಬೇಕು. ಅಲ್ಲದೆ ಸಂತ್ರಸ್ತರ ಪರಿಹಾರ ನಿಧಿ ಮೂಲಕ ಸರ್ಕಾರ ಆರ್ಥಿಕವಾಗಿಯೂ ನೆರವಾಗುವಂತೆ ನಿರ್ದೇಶಿಸಬೇಕು ಎಂದು ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿಕೊಂಡಿದ್ದರು.ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು, ಪವಿತ್ರ ಭೂಮಿ ಭಾರತ ಈಗ ಅತ್ಯಾಚಾರಿಗಳ ನಾಡಾಗಿದೆ, ಪ್ರತಿ 15 ನಿಮಿಷಗಳಿಗೊಮ್ಮೆ ಅತ್ಯಾಚಾರ ನಡೆಯುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಕೊಯಂಬತ್ತೂರಿನಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕೆ ತಿರುಪ್ಪುರ್​ನ ರಾಜೇಶ್​ಕುಮಾರ್​ ಬಳಿಗೆ ತೆರಳಿ ನೌಕರಿ ಕೇಳಿದ್ದಳು. ಕೆಲಸ ಕೊಡಿಸುವುದಾಗಿ ಹೇಳಿದ್ದ ಆತ ಆಕೆಯನ್ನು ಬೇರೆಡೆಗೆ ಕರೆದೊಯ್ದು, ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರ ನಡೆಸಿದ್ದ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಉಳಿದವರ ಪತ್ತೆಗೆ ಶೋಧ ಮುಂದುವರಿದಿದ್ದು, ತನಿಖೆ ನಡೆಯುತ್ತಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + fourteen =
Remember me
