ನವದೆಹಲಿ:ಭಾನುವಾರ ಸಂಜೆ ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ತೀವ್ರತೆ ದಾಖಲಾಗಿದೆ. ಕಳೆದ 24 ಘಂಟೆಗಳ ಅವಧಿಯಲ್ಲಿ ನೇಪಾಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ.
ಭಾನುವಾರ ಸಂಜೆ 5:18ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
Earthquake of Magnitude:4.3, Occurred on 22-10-2023, 17:18:57 IST, Lat: 28.03 & Long: 84.74, Depth: 5 Km ,Location: Nepal for more information Download the BhooKamp Apphttps://t.co/GmbhxHPsGb@ndmaindia@Indiametdept@Dr_Mishra1966@Ravi_MoES@KirenRijijupic.twitter.com/EcrOju6zVX
ಇದನ್ನೂ ಓದಿ:ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತ್ಯು
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS), ಭಾನುವಾರ ಸಂಜೆ 5:18 ರ ಸುಮಾರಿಗೆ ನೇಪಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಳಗ್ಗೆ 7.39ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಇನ್ನು ಹಿಮಾಲಯ ತಪ್ಪಲಿನ ಈ ದೇಶದಲ್ಲಿ ಭೂಕಂಪ ಸಾಮಾನ್ಯ ಎನ್ನುವಂತಾಗಿದೆ. ನೇಪಾಳವು ವಿಶ್ವದ 11ನೇ ಅತಿ ಹೆಚ್ಚು ಭೂಕಂಪನ ಪೀಡಿತ ರಾಷ್ಟ್ರವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 7 =
Remember me
