ಅಹ್ಮದ್​ನಗರ (ಮಹಾರಾಷ್ಟ್ರ):ಚುನಾವಣೆಗು ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕವು ಡಿಜೆ ಸೌಂಡ್, ಮೆರವಣಿಗೆಯಂತಹ ಸಂಭ್ರಮಾಚರಣೆ ಮಾಡುತ್ತಾರೆ. ಈ ರೀತಿ ಶಾಸಕ ಅಥವಾ ಸಂಸದರ ಚುನಾವಣೆಯಲ್ಲಿ ಸಾಮಾನ್ಯವಾಗಿ ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.
ಇದನ್ನೂ ಓದಿರಿ:ಒಂದೆಡೆ ಹೆತ್ತಾಕೆ… ಇನ್ನೊಂದೆಡೆ ಜೀವದ ಗೆಳತಿ… ಇಬ್ಬರನ್ನೂ ಒಟ್ಟಿಗೆ ಆಯ್ಕೆ ಮಾಡುವಂತಿಲ್ಲ: ಏನು ಮಾಡಲಿ?
ಮಹಾರಾಷ್ಟ್ರದ ಅಹ್ಮದ್​ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪ್ರಮಾಣ ವಚನ ಸ್ವೀಕರಿಸಲು ಫೆ. 12ರಂದು ಹೆಲಿಕಾಪ್ಟರ್​ನಲ್ಲಿ ಆಗಮಿಸಿದರು. ಉದ್ಯಮಿ ಆಗಿರುವ ಜಲಿಂದರ್​ ಗಾಗರೆ (50) ಪುಣೆಯಲ್ಲಿ ಕಂಪನಿಯನ್ನು ಹೊಂದಿದ್ದಾರೆ.
ಹೆಲಿಕಾಪ್ಟರ್​ ಅನ್ನು ಬುಕ್​​ ಮಾಡಿದ ಜಲಿಂದರ್​, ಪುಣೆಯಿಂದ ಹಳ್ಳಿಗೆ ತೆರಳಿದ್ದಾರೆ. ಬಳಿಕ 12 ಎತ್ತಿನ ಗಾಡಿಗಳಿಂದ ಗ್ರಾಮ ಪಂಚಾಯಿತಿಗೆ ಮೆರವಣಿಗೆ ಹೋಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮದ ಅಬಿವೃದ್ಧಿಗಾಗಿ ಚುನಾವಣೆಗೆ ಸ್ಪರ್ಧಿಸಿದ್ದಾಗಿ ತಿಳಿಸಿದರು.(ಏಜೆನ್ಸೀಸ್​)
ಇದನ್ನೂ ಓದಿರಿ:ಕತ್ತಲಾದರೂ ಮನೆಗೆ ಹಿಂತಿರುಗದ ಹೆಣ್ಣುಮಕ್ಕಳು, ಹುಡುಕುತ್ತಾ ಹೊಲಕ್ಕೆ ಹೋದ ಪಾಲಕರಿಗೆ ಕಾದಿತ್ತು ಶಾಕ್!
ಕರೊನಾ ಲಸಿಕೆ ಹಾಕಿಸಿಕೊಳ್ಳಲು ಆರು ಮೈಲಿ ಹಿಮದ ರಾಶಿಯಲ್ಲಿ ನಡೆದು ಬಂದ 90ರ ವೃದ್ಧೆ!

ಬಾಲಿವುಡ್ ನಟನ ಆತ್ಮಹತ್ಯೆ ಪ್ರಕರಣ : ಹೆಂಡತಿ, ಅತ್ತೆ ನೀಡಿದ್ದರೇ ಕಿರುಕುಳ ?

ಟೂಲ್‌ಕಿಟ್‌ ಷಡ್ಯಂತ್ರ ಬಯಲಾಗುತ್ತಿದ್ದಂತೆಯೇ ಕೋರ್ಟ್‌ಗೆ ದಿಶಾ ದೌಡು: ದಾಖಲೆ ಬಹಿರಂಗ ಬೇಡ ಎಂದು ಕೋರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
