ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ರಾಜ್ಯಕ್ಕೆ ತೀವ್ರ ಹಿನ್ನಡೆಯಾಗಿದೆ. ಮಹದಾಯಿ ನೀರು ಬಳಕೆ ಸಂಬಂಧ ಕರ್ನಾಟಕ ವಿರುದ್ಧ ಗೋವಾ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಕರ್ನಾಟಕ ನೀರು ತಿರುಗಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ತಜ್ಱರ ಸಮಿತಿ ರಚಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.
ಮಹದಾಯಿಯಿಂದ ಮಲಪ್ರಭಾಕ್ಕೆ ನೀರು ತಿರುಗಿಸುತ್ತಿದೆ ಎಂದು ಗೋವಾ ನ್ಯಾಯಪೀಠದ ಮುಂದೆ ದೂರು ದಾಖಲಿಸಿತ್ತು. ನೀರು ತಿರುಗಿಸುತ್ತಿರುವ ಆರೋಪ ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ ಈ ಆದೇಶ ಮಾಡಿ ನಾಲ್ಕು ವಾರಗಳಲ್ಲಿ ಸಮಿತಿಯಿಂದ ವರದಿ ನೀಡಲು ಸೂಚನೆ ನೀಡಿದೆ.
ನೀರು ತಿರುಗಿಸುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಮನವರಿಕೆ ಮಾಡುವಲ್ಲಿ ಕರ್ನಾಟಕ ವಿಫಲವಾಗಿದೆ. ಗೋವಾ ಪರ ವಾದಿಸಿದ ಹಿರಿಯ ವಕೀಲ ನರಸಿಂಹನ್, ಪರಿಸರ ಸಮ್ಮತಿ ಸಿಗದೆ ಕರ್ನಾಟಕ ತನ್ನ ಅನುಕೂಲಕ್ಕೆ ತಕ್ಕಂತೆ ಮಹದಾಯಿ ನೀರನ್ನು ಮಲಪ್ರಭಾಕ್ಕೆ ತಿರುಗಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸುಪ್ರೀಂಕೋರ್ಟ್ ಏ.4ಕ್ಕೆ ವಿಚಾರಣೆ ಮುಂದೂಡಿತು.
ಡಿ ಬಾಸ್​ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ್ರಾ ಜಗ್ಗೇಶ್​? ಸಿನಿಮಾ ಸೆಟ್​ನಲ್ಲೇ ನವರಸ ನಾಯಕನ ಬೆವರಿಳಿಸಿದ ದರ್ಶನ್​ ಅಭಿಮಾನಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 3 =
Remember me
