ಬೆಂಗಳೂರು:ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎಯನ್ನು ಮಣಿಸಲು ಕಾಂಗ್ರೆಸ್​ ನೇತೃತ್ವದ ಯುಪಿಎ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಯುಪಿಎ ಅಂಗಪಕ್ಷಗಳ ನಾಯಕರು ಮಹಾಘಟಬಂಧನ್​ಗೆ ‘ಕೈ’ಜೋಡಿಸಿದ್ದಾರೆ.
ಈ ಮಹಾಘಟಬಂಧನ್​ನ ಭಾಗವಾಗಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲದೆ ಕೇಂದ್ರದ ವಿಪಕ್ಷದ ಇತರ ಪಕ್ಷಗಳ ನಾಯಕರಾದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮುಂತಾದ ನಾಯಕರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂತಾದ ನಾಯಕರು ಜೊತೆಯಾಗಿ ಸ್ವಾಗತಿಸಿದ್ದಾರೆ.
ಎಐಸಿಸಿ ಕರೆದಿರುವ ವಿಪಕ್ಷಗಳ ಮುಖಂಡರ ಸಭೆಯಲ್ಲಿ ಭಾಗವಹಿಸಲು ಈ ನಾಯಕರೆಲ್ಲ ಆಗಮಿಸಿದ್ದು, ಇಂದು ಔಪಚಾರಿಕವಾಗಿ ಒಂದು ಸಭೆ ನಡೆಯಲಿದ್ದು, ನಾಳೆಯ ಸಭೆಯಲ್ಲಿ ಮಹತ್ವದ ಮಾತುಕತೆ ನಡೆಯಲಿದೆ.
ಇದನ್ನೂ ಓದಿ:ಎಕ್ಸಾಂ ದಿನವೇ 8ನೇ ಮಹಡಿಯಿಂದ ಹಾರಿ ಪ್ರಾಣ ಕಳ್ಕೊಂಡ ವಿದ್ಯಾರ್ಥಿ: ಕಾರಣ ಇದೇನಾ?
ಜುಲೈ 20ರಿಂದ ಆರಂಭವಾಗುವ ಸಂಸತ್ ಅಧಿವೇಶನದಲ್ಲಿ ಎನ್​ಡಿಎನಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎಯನ್ನು ಮಣಿಸಲು ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಈ ಸಭೆ ಆಯೋಜನೆಗೊಂಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್​ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಸುಮಾರು 24 ವಿಪಕ್ಷ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಸರ್ವಾಧಿಕಾರಿ, ಕೋಮುವಾದಿ ಮತ್ತು ಭ್ರಷ್ಟ ಪ್ರಭುತ್ವದ ವಿರುದ್ದದ ಹೋರಾಟದಲ್ಲಿ ಒಂದಾಗಲು ಆಗಮಿಸುತ್ತಿರುವ ದೇಶದ ಪ್ರಮುಖ ವಿರೋಧಪಕ್ಷಗಳ ನಾಯಕರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಪ್ರಭುತ್ವದ ಆಶಯಗಳ ಕೂಡು ಬದುಕಿನ ದೀರ್ಘ ಪರಂಪರೆ ಹೊಂದಿರುವ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ ಎನ್ನುವುದು ಕನ್ನಡಿಗರೆಲ್ಲರ ಒಕ್ಕೊರಲಿನ ಹಾರೈಕೆ ಎಂಬುದಾಗಿ ಮುಖ್ಯಮಂತ್ರಿ ಇಂದು ಟ್ವೀಟ್ ಮಾಡುವ ಮೂಲಕ ಈ ಮಹಾಘಟಬಂಧನ್ ಸಭೆಯ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ಬಿಜೆಪಿಯೇತರ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ಶಿವಸೇನಾ‌ ಮುಖ್ಯಸ್ಥರೂ ಆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ, ಜೆಡಿಯು ಮುಖಂಡರೂ ಆದ ಬಿಹಾರ‌ ಮುಖ್ಯಮಂತ್ರಿ ನಿತೀಶ್​ ಕುಮಾರ್ ಹಾಗೂ ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಎಚ್ಎಎಲ್ ವಿಮಾನ‌ ನಿಲ್ದಾಣದಲ್ಲಿ ಸೋಮವಾರ ಸಂಜೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಇದ್ದರು.
ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?

ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − three =
Remember me
