ಅಯೋಧ್ಯೆ:ಶ್ರೀ ರಾಮ ಮಂದಿರ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಅಧ್ಯಕ್ಷ ಮಹಾಂತ ನೃತ್ಯಗೋಪಾಲ ದಾಸ್ ಅವರನ್ನು ಇಂದು ಲಖನೌನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ತೊಂದರೆ ಅನುಭವಿಸಿದ ಕಾರಣ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಮಹಾಂತ ಅವರಿಗೆ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಕೂಡಲೇ ಅವರನ್ನು ಅಯೋಧ್ಯೆಯ ಸರ್ಕಾರಿ ಶ್ರೀರಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಂತರ ತೀವ್ರವಾದ ಉಸಿರಾಟದ ತೊಂದರೆ ಇದೆ ಎಂದು ಹೇಳಿದ ಕಾರಣ ಲಖನೌಗೆ ಸ್ಥಳಾಂತರಿಸಲಾಗಿದೆ. ಮಹಾಂತ ಅವರ ಆರೋಗ್ಯ ಸ್ಥಿರವಾಗಿದೆ. ಕೋವಿಡ್ 19 ಟೆಸ್ಟ್ ನೆಗೆಟಿವ್ ಬಂದಿದೆ ಎಂದು ಅಯೋಧ್ಯೆಯ ಜಿಲ್ಲಾ ದಂಡಾಧಿಕಾರಿ ಅನುಜ್ ಕುಮಾರ್ ಝಾ ಹೇಳಿದ್ದಾರೆ.
ಇದನ್ನೂ ಓದಿ:ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಮುಂಬೈ ರಣಜಿ ತಂಡದ ಮಾಜಿ ಆಟಗಾರ ಬಂಧನ
ಕಳೆದ ಕೆಲವು ತಿಂಗಳುಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ನಿಗಾವಹಿಸಲಾಗುತ್ತಿದ್ದು, ಬೆಳಗ್ಗೆ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಝಾ ತಿಳಿಸಿದ್ದಾರೆ. (ಏಜೆನ್ಸೀಸ್)
2 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳವಾಯ್ತು ಹೂಡಿಕೆದಾರರ ಸಂಪತ್ತು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eleven =
Remember me
