ಮುಂಬೈ:ಕರೊನಾವೈರಸ್ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲಾಗದೇ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನರಿಗೆ ಲಾಕ್​ಡೌನ್ ಭೂತವನ್ನು ತೋರಿಸಿ ಹೆದರಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ನಾರಾಯಣ ರಾಣೆ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಮಹಾರಾಷ್ಟ್ರ ಜನಕ್ಕೆ ಲಾಕ್​ಡೌನ್ ಅವಶ್ಯಕತೆ ಇಲ್ಲ. ಮತ್ತೊಂದು ಲಾಕ್​ಡೌನ್ ಸ್ವೀಕಾರಾರ್ಹವಲ್ಲ. ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು, ಆರೋಗ್ಯ ಸೌಕರ್ಯಗಳನ್ನು ಹೆಚ್ಚಿಸುವ ಕಡೆಗೆ ಗಮನ ಕೊಡಬೇಕು ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನಿಂದ 54 ಸಾವಿರ ಜನ ಮೃತಪಟ್ಟಿದ್ದಾರೆ. ಆದರೂ ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್ ಬೇಕಾಗಿಲ್ಲ. ಮುಖ್ಯಮಂತ್ರಿಯವರಿಗೆ ತಮ್ಮ ಕುಟುಂಬದವರಷ್ಟೇ ಮುಖ್ಯವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಠಾಕ್ರೆ ಸರ್ಕಾರ ಜನರೊಂದಿಗೆ ಸರಿಯಾಗಿ ನಡೆದುಕೊಳ್ಳಬೇಕು. ಕಳೆದ ಒಂದು ವರ್ಷದಿಂದ ಆರೋಗ್ಯದ ಮೂಲಭೂತ ಸೌಕರ್ಯಗಳ ಹೆಚ್ಚಿಸುವ ಕಡೆಗೆ ಗಮನ ನೀಡಿಲ್ಲ. ಬದಲಿಗೆ ಈಗ ಜನರಿಗೆ ಮತ್ತೊಂದು ಲಾಕ್​ಡೌನ್ ಎಂದು ಹೆದರಿಸುತ್ತಿದ್ದಾರೆ ಎಂದು ನಾರಾಯಣ ರಾಣೆ ಹೇಳಿದ್ದಾರೆ. ಅಲ್ಲದೇ ರಾಣೆ ಅವರು, ಮಹಾರಾಷ್ಟ್ರದಲ್ಲಿ ಅಲ್ಲಲ್ಲಿ ಹೇರಲಾಗುತ್ತಿರುವ ನೈಟಗ ಕರ್ಫ್ಯೂವನ್ನೂ ವಿರೋಧಿಸಿದ್ದಾರೆ.
“ಅಯ್ಯಪ್ಪಸ್ವಾಮಿ ಭಕ್ತರನ್ನು ಲಾಠಿಗಳಿಂದ ಸ್ವಾಗತಿಸಲಾಗಿದೆ” – ಕೇರಳದಲ್ಲಿ ಮೋದಿ

50 ವರ್ಷಗಳ ಬಳಿಕ ಪ್ರೇಮಿಗಳ ಮಿಲನ… 82 ವರ್ಷದ ಅಜ್ಜನಲ್ಲಿ ಪುಳಕ… ಇದು ಡಿಫರೆಂಟ್​ ಲವ್​ ಸ್ಟೋರಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eleven =
Remember me
