ಮುಂಬೈ:ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಅವರಿಗೆ ಕೋವಿಡ್​-19 ಪಾಸಿಟಿವ್ ದೃಢಪಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಹಾಗೆ ಕರೊನಾ ಪಾಸಿಟಿವ್​ ಬಂದಿರುವ ವಿಚಾರವನ್ನು ಪವಾರ್​ ಖುದ್ದು ಟ್ವೀಟ್ ಮೂಲಕ ತಿಳಿಸಿ ಖಚಿತಪಡಿಸಿದ್ದಾರೆ.
ಸದ್ಯ ಅವರಲ್ಲಿ ಸೋಂಕಿನ ಲಕ್ಷಣಗಳು ಇರದಿದ್ದರೂ ಅವರು ವೈದ್ಯರ ಸಲಹೆ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಆರೋಗ್ಯ ಸರಿಯಾಗೇ ಇದೆ, ನನ್ನ ಬಗ್ಗೆ ಯಾರೂ ಚಿಂತಿಸಬೇಕಾಗಿಲ್ಲ. ಸ್ವಲ್ಪ ವಿಶ್ರಾಂತಿಯ ಬಳಿಕ ನಾನು ನಿಮ್ಮೆಲ್ಲರ ನಡುವೆ ಕಾಣಿಸಿಕೊಳ್ಳುತ್ತೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.
ನಾಲ್ಕು ದಿನಗಳ ಹಿಂದೆಯೇ ಜ್ವರ ಕಾಣಿಸಿದ್ದರಿಂದ ಅವರು ಕ್ವಾರಂಟೈನ್​ಗೆ ಒಳಗಾಗಿದ್ದರು. ಆದರೆ ಕರೊನಾ ನೆಗೆಟಿವ್​ ಬಂದಿದೆ ಎಂದು ಅವರ ಪಕ್ಷದ ವಕ್ತಾರರು ಹೇಳಿದ್ದರು. ಅಲ್ಲದೆ ಕಳೆದ ಒಂದು ವಾರದಿಂದ ಅವರು ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಇದ್ದರು.
ಅಜಿತ್ ಪವಾರ್ ಸೇರಿ ಮಹಾರಾಷ್ಟ್ರದಲ್ಲಿ 15ಕ್ಕೂ ಅಧಿಕ ಸಚಿವರು ಈಗಾಗಲೇ ಸೋಂಕಿಗೆ ಒಳಗಾದಂತಾಗಿದೆ. ಎರಡು ದಿನಗಳ ಹಿಂದೆ ವಿರೋಧ ಪಕ್ಷದ ನಾಯಕ, ಬಿಜೆಪಿಯ ದೇವೇಂದ್ರ ಫಡ್ನವಿಸ್​ ಅವರಲ್ಲಿ ಸೋಂಕು ದೃಢಪಟ್ಟಿತ್ತು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
