ಮುಂಬೈ:ಬೆಳಗಾವಿ ಗಡಿ ವಿವಾದದ ನಡುವೆ ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ 865 ಹಳ್ಳಿಗಳಿಗೆ ಆರೋಗ್ಯ ಯೋಜನೆಯನ್ನು ವಿಸ್ತರಿಸುವಂತೆ ಸೋಮವಾರ ಆದೇಶ ಹೊರಡಿಸಿದೆ.
ಈಗಾಗಲೇ ಅಂತ್ಯೋಧ್ಯಯ ಆಹಾರ ಯೋಜನೆ, ಅನ್ನಪೂರ್ಣ ಪಡಿತರ ಚೀಟಿ ಹೊಂದಿರುವವರು ಮಹಾತ್ಮ ಜ್ಯೋತಿ ಜ್ಯೋತಿರಾವ್​ ಪುಲೆ ಜನ್​ ಆರೋಗ್ಯ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಮಹಾರಾಷ್ಟ್ರ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:12ನೇ ತರಗತಿ ವಿದ್ಯಾರ್ಥಿಗಳಿಗಿಲ್ಲ ಮೊಘಲ್​ ಅಧ್ಯಯನ;ವ್ಯಾಪಕ ಖಂಡನೆ
ಕರ್ನಾಟಕದ ಬೆಳಗಾವಿ, ಕಾರವಾರ, ಕಲಬುರಗಿ, ಬೀದರ್​ ಜಿಲ್ಲಾ ವ್ಯಾಪ್ತಿಯಲ್ಲಿರುವ 12 ತಾಲ್ಲೂಕುಗಳ 865 ಹಳ್ಳಿಗಳ ಜನರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆಂದು ಹೇಳಲಾಗಿದೆ. ಈ ಯೋಜನೆಯಡಿ ಒಂದು ಕುಟುಂಬವು ಸರ್ಕಾರ ಗುರುತಿಸಿರುವ 34 ಆಸ್ಪತ್ರೆಗಳಲ್ಲಿ 1.5 ಲಕ್ಷ ರೂಪಾಯಿ ವರೆಗಿನ 996 ತರಹದ ಚಿಕಿತ್ಸೆ ಪಡೆಯಬಹುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
ಜನರು ಮಹಾತ್ಮ ಜ್ಯೋತಿರಾವ್​ ಪುಲೆ ಆರೋಗ್ಯ ಯೋಜನೆಯಡಿ ಸರ್ಕಾರಿ ಹಾಗೂ ಸರ್ಕಾರ ಗುರುತಿಸಿರುವ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಯೋಜನ ಪಡೆಯಬಹುದು ಎಂದು ಮಹಾರಾಷ್ಟ್ರ ಸರ್ಕಾರ ಸೋಮವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 7 =
Remember me
