ಮುಂಬೈ:ರಾಜ್ಯದ ಎಲ್ಲ ಕಾಲೇಜುಗಳಲ್ಲಿಯೂ ಫೆ. 19ರಿಂದ ರಾಷ್ಟ್ರಗೀತೆ ಹಾಡುವುದನ್ನು ಮಹಾರಾಷ್ಟ್ರ ಸರ್ಕಾರ ಕಡ್ಡಾಯಗೊಳಿಸಿ ಬುಧವಾರ ಸುತ್ತೋಲೆ ಹೊರಡಿಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನಾ-ಕಾಂಗ್ರೆಸ್​-ಎನ್​ಸಿಪಿ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್​ ಸಮಂತ್​, ಫೆ. 19ರಿಂದ ಎಲ್ಲ ಕಾಲೇಜುಗಳಲ್ಲಿಯೂ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಹೇಳಿದರು.
ಚಿತ್ರಮಂದಿರಗಳಲ್ಲಿ ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಪ್ಲೇ ಮಾಡುವಂತೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯದ ಸಾರ್ವಜನಿಕ ಸಮಾರಂಭಗಳಲ್ಲಿಯೂ ಇದನ್ನು ಅಳವಡಿಸಿಕೊಳ್ಳಿ ಎಂದು ಕಳೆದ ಜನವರಿಯಲ್ಲೇ ಸಮಂತ್​ ಅವರು ನಿರ್ದೇಶಿಸಿದ್ದರು.
ರಾಷ್ಟ್ರಗೀತೆಯನ್ನು ಪ್ಲೇ ಮಾಡುವುದರಿಂದ ಮತ್ತು ಹಾಡುವುದರಿಂದ ಯುವ ಜನಾಂಗದಲ್ಲಿ ರಾಷ್ಟ್ರದ ಮೇಲೆ ಮತ್ತಷ್ಟು ಹೆಮ್ಮೆಯ ಭಾವನೆ ಮೂಡುತ್ತದೆ. ಇದಲ್ಲದೆ, ಭಾರತ ಸ್ವಾತಂತ್ರ್ಯದ ಮಹತ್ವದ ಬಗ್ಗೆಯೂ ಬೋಧಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು.(ಏಜೆನ್ಸೀಸ್​)
Maharashtra minister Uday Samant: Maharashtra government to make singing national anthem in colleges compulsory from 19th February.pic.twitter.com/c4eiPLxLih
— ANI (@ANI)February 12, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
