ಮುಂಬೈ:ಮಹಾರಾಷ್ಟ್ರದ ಗೃಹ ಸಚಿವ ಅನಿಲ್​ ದೇಶ್​ಮುಖ್​ ಸೋಮವಾರದಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅವರ ವಿರುದ್ಧ ಬಾಂಬೆ ಹೈ ಕೋರ್ಟ್​ ಸಿಬಿಐ ತನಿಖೆ ಆದೇಶಿಸಿರುವ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ರಾಜೀನಾಮೆ ಕೊಡುವುದಕ್ಕೂ ಮುನ್ನ ಅನಿಲ್​ ಅವರು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಅದಾದ ಮೇಲೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿಕೊಡಲಾಗಿದೆ. ಅದರ ಮಾಹಿತಿಯನ್ನು ಎನ್​ಸಿಪಿ ಸಚಿವ ನವಾಬ್​ ಮಲಿಕ್​ ಅವರು ಹಂಚಿಕೊಂಡಿದ್ದಾರೆ.
ಅನಿಲ್​ ಅವರ ವಿರುದ್ಧ ಮುಂಬೈ ಮಾಜಿ ಪೊಲೀಸ್​ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಮುಂಬೈನ ಬಾರ್​ ಮತ್ತು ಹೋಟೆಲ್​ಗಳಿಂದ ಮಾಸಿಕ 100 ಕೋಟಿ ರೂಪಾಯಿ ಸಂಗ್ರಹಿಸಿ ಎಂದು ಅನಿಲ್​ ಅವರು ಸಚಿನ್​ ವಾಜೆ ಮತ್ತು ಇತರ ಪೊಲೀಸ್​ ಅಧಿಕಾರಿಗಳಿಗೆ ಹೇಳಿದ್ದರು ಎಂದು ಆರೋಪದಲ್ಲಿ ತಿಳಿಸಲಾಗಿದೆ. ಈ ಆರೋಪದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಬಾಂಬೆ ಹೈಕೋರ್ಟ್​ ಆದೇಶಿಸಿದೆ. 15 ದಿನಗಳೊಳಗೆ ಪ್ರಾರ್ಥಮಿಕ ತನಿಖೆ ನಡೆಸಬೇಕೆಂದು ತಿಳಿಸಲಾಗಿದೆ. (ಏಜೆನ್ಸೀಸ್​)
ಚಿನ್ನಮ್ಮ ಜೈಲಿಂದ ಬಿಡುಗಡೆಯಾಗಿದ್ದರೂ ಮತ ಹಾಕುವಂತಿಲ್ಲ! ಕುತೂಹಲ ಕೆರಳಿಸಿದ ವೋಟರ್​ ಲಿಸ್ಟ್!

ಬಾಲ್ಕನಿಯಲ್ಲಿ ಬೆತ್ತಲಾಗಿ ನಿಂತು ಪೋಸ್​ ಕೊಟ್ಟ ಹೆಂಗಳೆಯರು! ಕೆಲವೇ ಗಂಟೆಗಳಲ್ಲಿ ಕಾದಿತ್ತು ಬಿಗ್​ ಶಾಕ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × one =
Remember me
