ಮುಂಬೈ:ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವದ್ ಅವರಿಗೆ ಕರೊನಾ ಸೋಂಕು ತಗುಲಿದೆ. ಕರೊನಾ ಸೋಂಕಿತರ ಸಂಪರ್ಕಕ್ಕೆ ಹೋಗಿದ್ದ ಅವರು ಏ.13ರಿಂದಲೂ ಸೆಲ್ಫ್​ ಕ್ವಾರಂಟೈನ್​ನಲ್ಲಿ ಇದ್ದರು.
ನಿನ್ನೆ ತಪಾಸಣೆ ನಡೆಸಿದಾಗ ಕರೊನಾ ನೆಗೆಟಿವ್ ಎಂದು ವರದಿ ಬಂದಿತ್ತು. ಆದರೂ ಕ್ವಾರಂಟೈನ್​ ಅವಧಿ ಮುಗಿಸುತ್ತೇನೆ ಎಂದಿದ್ದ ಜಿತೇಂದ್ರ ಅವರಿಗೆ ಇಂದು ಸೋಂಕು ದೃಢಪಟ್ಟಿದೆ.
ಸ್ವಲ್ಪ ದಿನಗಳ ಹಿಂದೆ ಜಿತೇಂದ್ರ ಅವರ ಮನೆಯ ಹೌಸ್​ಕೀಪಿಂಗ್​ ಕೆಲಸಗಾರರು, ಐವರು ಭದ್ರತಾ ಸಿಬ್ಬಂದಿಯಲ್ಲಿ ಕರೊನಾ ವೈರಸ್​ ದೃಢಪಟ್ಟಿತ್ತು. ತಮ್ಮ ನೇರ ಸಂಪರ್ಕದಲ್ಲಿದ್ದ ಸುಮಾರು 14 ಮಂದಿಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡ ಬಳಿಕ, ಸಚಿವರೂ ಸೆಲ್ಫ್​ ಕ್ವಾರಂಟೈನ್​ಗೆ ಒಳಗಾಗಿದ್ದರು. ಸದ್ಯ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅನೇಕ ದಿನಗಳಿಂದ ಜಿತೇಂದ್ರ ಅವದ್​ ಅವರು ಯಾರ ಸಂಪರ್ಕಕ್ಕೂ ಹೋಗಿಲ್ಲದ ಕಾರಣ ಉಳಿದ ಅವರ ಸಹದ್ಯೋಗಿಗಳಿಗೆ ಸೋಂಕು ತಗುಲುವ ಅಪಾಯ ಕಡಿಮೆ. (ಏಜೆನ್ಸೀಸ್​)
ಕರೊನಾ ಹಾಟ್​ಸ್ಫಾಟ್​ ಆದ ಹೊಂಗಸಂದ್ರ; ಇಂದು 9 ಜನರಲ್ಲಿ ಸೋಂಕು ದೃಢ..ಪೂರ್ತಿ ಏರಿಯಾ ಸೀಲ್​ಡೌನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + twenty =
Remember me
