ಥಾಣೆ:ತನ್ನ ಪತಿಯೊಂದಿಗೆ ಜಗಳವಾಡಿ ಮನನೊಂದ 20 ವರ್ಷದ ನವವಿವಾಹಿತ ಮಹಿಳೆಯೊಬ್ಬಳು ಬಹುಮಹಡಿ ವಸತಿ ಕಟ್ಟಡದಿಂದ ಜಿಗಿದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಬಳಿಕ ಮಹಿಳೆಯ ಹೊಟ್ಟೆಯಲ್ಲಿ ಬಟ್ಟೆ ಬಿಟ್ಟ ವೈದ್ಯ, ತನಿಖೆಗೆ ಆದೇಶ..ಮಹಿಳೆಯನ್ನು ಪೂಜಾ ಕರಣ್ ಸೋಲಂಕಿ ಎಂದು ಗುರುತಿಸಲಾಗಿದ್ದು, ಶುಕ್ರವಾರ ಡೊಂಬಿವಿಲಿ ಪ್ರದೇಶದಲ್ಲಿ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಹೋದಾಗ ಪತ್ನಿ ಬೇರೆಯವರೊಂದಿಗೆ ಮಾತನಾಡುವುದನ್ನು ಪತಿ ವಿರೋಧಿಸಿದ ನಂತರ ದಂಪತಿ ನಡುವೆ ಜಗಳ ನಡೆದಿದೆ. ಆ ಬಳಿಕ ಆಕೆ 10 ಅಂತಸ್ತಿನ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ಇತರ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 2 =
Remember me
