ನವದೆಹಲಿ: ಕೋವಿಡ್​ ನಿಯಂತ್ರಣಕ್ಕೆ ಬರುವ ತನಕ ಶೈಕ್ಷಣಿಕ ಚಟುವಟಿಕೆಗಳ ಮರು ಆರಂಭ ಕಷ್ಟ ಸಾಧ್ಯ. ಪರಿಸ್ಥಿತಿ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಘೊಷಿಸಲಾಗಿದ್ದ ಪ್ರವೇಶ, ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಲಾಗುತ್ತಿದೆ.
ಆದರೆ, ಅಂತಿಮ ವರ್ಷದ ಅಥವಾ ಸೆಮಿಸ್ಟರ್​ ಪರೀಕ್ಷೆಗಳನ್ನು ನಡೆಸಬೇಕು ಎಂದು ಯುಜಿಸಿ ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ಈಗ ಪರೀಕ್ಷೆ ಹಾಜರಾಗಲು ಸಾಧ್ಯವಿಲ್ಲದವರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ತಿಳಿಸಿದೆ.
ಇದನ್ನೂ ಓದಿ;ಪುನರಾರಂಭಿಸಿದ ಒಂದೇ ವಾರದಲ್ಲಿ ದೇಶಾದ್ಯಂತ ಶಾಲಾ-ಕಾಲೇಜು ಬಂದ್; ದ್ವೀಪರಾಷ್ಟ್ರದಲ್ಲಿ ಮತ್ತೆ ಕಟ್ಟೆಚ್ಚರ
ಆದರೆ, ಹೆಚ್ಚುತ್ತಿರುವ ಕೋವಿಡ್​ ಪ್ರಕರಣಗಳಿಂದಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನೂ ಕೂಡ ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. ಸಿಎಂ ಉದ್ಧವ್​ ಠಾಕ್ರೆ ನೇತೃತ್ವದಲ್ಲಿ ನಡೆದ ವಿಪತ್ತು ನಿರ್ವಹಣಾ ಸಮಿತಿ ಸಬೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಇನ್ನೆರಡು ತಿಂಗಳಲ್ಲಿ ಪರೀಕ್ಷೆ ನಡೆಸಿ ಎಂಬ ಯುಜಿಸಿ ನಿರ್ದೇಶನದ ಬಳಿಕವೂ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರಲು ರಾಜ್ಯ ಸರ್ಕಾರ ಮತ್ತೊಮ್ಮೆ ನಿರ್ಧಾರ ಕೈಗೊಂಡಿದೆ. ಕೋವಿಡ್​ ಸಂಕಷ್ಟದ ಸಮಯದಲ್ಲಿ 5-6 ಲಕ್ಷ ವಿದ್ಯಾರ್ಥಿಗಳನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವ ಉದಯ್​ ಸಮಂತ್​ ತಿಳಿಸಿದ್ದಾರೆ.
ಇದನ್ನೂ ಓದಿ;ಅಂತಿಮ ಸೆಮಿಸ್ಟರ್​ ಪರೀಕ್ಷೆಯನ್ನೂ ರದ್ದುಗೊಳಿಸಿ; ವಿದ್ಯಾರ್ಥಿಗಳ ಭವಿಷ್ಯ ಕಾಪಾಡಿ
ಪಂಜಾಬ್​ನಲ್ಲೂ ಈಗಾಗಲೇ ಪರೀಕ್ಷೆ ನಡೆಸದಿರುವ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದ್ದರೂ, ಹೆಚ್ಚುತ್ತಿರುವ ಕೋವಿಡ್​ ಪ್ರಕರಣಗಳ ಹಿನ್ನೆಲೆಯಲ್ಲಿ ಇದು ಸಾಧ್ಯವೇ ಎಂಬುದು ಅನಿಶ್ಚಿತವಾಗಿದೆ.
ಕರೊನಾ ಲಸಿಕೆ ಯಶಸ್ವಿ ಎಂದು ಘೋಷಿಸಿದ ರಷ್ಯಾ ಮುಚ್ಚಿಟ್ಟಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 11 =
Remember me
