ಮುಂಬೈ:ಮುಂಬರವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದದ ಪ್ರಕಾರ 48 ಲೋಕಸಭೆ ಕ್ಷೇತ್ರಗಳ ಪೈಕಿ ಮಾಜಿ ಸಿಎಂ ಉದ್ಧವ್​ ಠಾಕ್ರೆ ನೇತೃತ್ವದ ಶಿವಸೇನೆ 20, ಕಾಂಗ್ರೆಸ್​ 18 ಹಾಗೂ ಶರದ್​ ಪವಾರ್​ ಬಣದ ಎನ್​ಸಿಪಿ (10) ಸ್ಥಾನಗಳಲ್ಲಿ ಸ್ಫರ್ಧಿಸಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಅಂಬಾನಿ ಮಗನ ವಿವಾಹ ಪೂರ್ವ ಸಮಾರಂಭಕ್ಕೆ ಖ್ಯಾತ ಗಾಯಕಿ ಪಡೆದಿರುವ ಸಂಭಾವನೆ ಕೇಳಿದರೆ ನೀವು ಶಾಕ್​ ಆಗೋದು ಪಕ್ಕಾ!
ಈ ಹಿಂದೆ ಐದು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದ ವಂಚಿತ್ ಬಹುಜನ್ ಅಘಾಡಿ, ಉದ್ಧವ್ ಶಿವ ಸೇನೆ ಬಣದ ಪಾಲಿನಿಂದ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಹಾಗೂ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲದೊಂದಿಗೆ ರಾಜು ಶೆಟ್ಟಿ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಲಿದ್ದಾರೆಂದು ತಿಳಿದು ಬಂದಿದೆ. ಮುಂಬೈನ 6 ಕ್ಷೇತ್ರಗಳಲ್ಲಿ 4ರಲ್ಲಿ ಶಿವಸೇನೆ ಹಾಗೂ 1ರಲ್ಲಿ ವಿಬಿಎ ಸ್ಪರ್ಧಿಸುವ ಸಾಧ್ಯತೆ ಇದೆ.
2019ರಲ್ಲಿ ಬಿಜೆಪಿ ಜೊತೆ ಸ್ಪರ್ಧಿಸಿದ್ದ ಶಿವಸೇನೆ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 18ರಲ್ಲಿ ಜಯ ಸಾಧಿಸಿತ್ತು. ಮುಂಬೈ ಸೌತ್​ ಸೆಂಟ್ರಲ್ ಹಾಗೂ ನಾರ್ತ್​ವೆಸ್ಟ್​ ಎರಡರಲ್ಲೂ ಗೆಲುವು ಸಾಧಿಸಿತ್ತು. ಆದರೆ ಈಗ ಬಹುಪಾಲು ಗೆದ್ದ ಸಂಸದರು ಶಿಂಧೆ ಬಣದಲ್ಲಿದ್ದಾರೆ. ಇನ್ನು ಕಾಂಗ್ರೆಸ್​ 25 ಕ್ಷೇತ್ರದಲ್ಲಿ ಸ್ಪರ್ಧಿಸಿ ಒಂದರಲ್ಲಿ ಗೆದ್ದರೆ, ಶರದ್​ ಪವಾರ್ ಎನ್​ಸಿಪಿ 19ರಲ್ಲಿ ಸ್ಪರ್ಧಿಸಿ 4ರಲ್ಲಿ ಗೆದ್ದಿದೆ ಈಗ ಎನ್​ಸಿಪಿ ಕೂಡ 2 ಬಣವಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 5 =
Remember me
