ಮುಂಬೈ:ಈಗಾಗಲೇ ಕರೊನಾದ ಎರಡನೇ ಅಲೆಯನ್ನು ಎದುರಿಸುತ್ತಿರುವ ಮಹಾರಾಷ್ಟ್ರ ಕರೊನಾದ ಮೂರನೇ ಅಲೆಗೂ ಸಿದ್ಧತೆ ಆರಂಭಿಸಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಮಾಣದ ಸೋಂಕು ತಗುಲುವ ಸಾಧ್ಯತೆಯಿರುವುದರಿಂದಾಗಿ ಮಕ್ಕಳ ಕೋವಿಡ್​ ಕೇಂದ್ರ ನಿರ್ಮಾಣಕ್ಕೆ ತಯಾರಿ ನಡೆಸಲಾಗುತ್ತಿದೆ.
ಮೂರನೇ ಅಲೆಯಲ್ಲಿ 18 ವರ್ಷಕ್ಕಿಂತ ಕೆಳಗಿನವರಿಗೆ ಹೆಚ್ಚು ತೊಂದರೆಯಾಗುವ ಸಾಧ್ಯತೆಯಿದೆ. ಚಿಕ್ಕ ವಯಸ್ಸಿನ ಮಕ್ಕಳನ್ನು ನಾವು ಕೋವಿಡ್​ ಕೇಂದ್ರಗಳಲ್ಲಿ ಒಬ್ಬಂಟಿಯಾಗಿ ಬಿಡಲಾಗುವುದಿಲ್ಲ. ಅವರ ತಾಯಿಯೂ ಅವರ ಜತೆ ಇರಬೇಕಾಗುತ್ತದೆ. ಸಾಮಾನ್ಯರಿಗೆ ಬಳಸುವ ವೆಂಟಿಲೇಟರ್​ಗಳನ್ನು ಮಕ್ಕಳಿಗೆ ಬಳಸಲಾಗುವುದಿಲ್ಲ. ಅವರಿಗಾಗಿ ವಿಶೇಷ ವೆಂಟಿಲೇಟರ್​ ಬೇಕಾಗುತ್ತದೆ. ಆ ಎಲ್ಲ ತಯಾರಿಯನ್ನು ನಮ್ಮ ಸರ್ಕಾರ ಮಾಡಿಕೊಳ್ಳಲಾರಂಭಿಸಿದೆ. ಮೂರನೇ ಅಲೆ ಮೇಲ್ವಿಚಾರಣೆಗೆ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್​ ತೋಪೆ ತಿಳಿಸಿದ್ದಾರೆ.
ಮೂರನೇ ಅಲೆ ಮೊದಲು ಮತ್ತು ಎರಡನೇ ಅಲೆಗಿಂತ ಹೆಚ್ಚು ಪರಿಣಾಮಕಾರಿಯಾಗಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೊದಲನೇ ಅಲೆಯಲ್ಲಿ ವಯಸ್ಕರು ಹೆಚ್ಚು ಸಮಸ್ಯೆಗೆ ಸಿಲುಕಿದರು, ಎರಡನೇ ಅಲೆಯಲ್ಲಿ ಮಧ್ಯಮ ವಯಸ್ಕರಿಗೆ ಸಮಸ್ಯೆ ಉಂಟಾಗಿದೆ, ಅದೇ ರೀತಿ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಆಗಬಹುದು ಎಂಬುದು ತಜ್ಞರ ಅಭಿಪ್ರಾಯವಾಗಿದೆ. (ಏಜೆನ್ಸೀಸ್​)
ಕೌದಿ ಕಲೆ ಖ್ಯಾತಿಯ ಗಂಗಾಬಾಯಿ ದೇಸಾಯಿ ಇನ್ನಿಲ್ಲ

ಕಸ ಎಸೆಯುವವರಿಗೆ ಬುದ್ಧಿ ಕಲಿಸಿದ ನಾಯಿ! ಈ ನಾಯಿಯಿಂದ ಕಲಿಯುವುದು ಸಾಕಷ್ಟಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 7 =
Remember me
