ಪುಣೆ:ಮಹಾರಾಷ್ಟ್ರದ ಪುಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು.
ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ ಎಂದ ಮಹಾನ್ ಸಮಾಜ ಸುಧಾರಕ, ಚಿಂತಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.
#WATCH| Maharashtra: Prime Minister Narendra Modi gets conferred with Lokmanya Tilak National Award in Pune.pic.twitter.com/zBLwRerKa5
— ANI (@ANI)August 1, 2023

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ನನಗೆ ಸ್ಮರಣೀಯ ಕ್ಷಣವಾಗಿದೆ ಎಂದರು. ಭಾರತದ ಸ್ವಾತಂತ್ರ್ಯದಲ್ಲಿ ಲೋಕಮಾನ್ಯ ತಿಲಕರ ಪಾತ್ರ ಹಾಗೂ ಅವರ ಕೊಡುಗೆಯನ್ನು ಕೇವಲ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ತಿಲಕ್​ ಅವರನ್ನು ಸ್ಮರಿಸಿದರು.
ನಾನು ಬಹುಮಾನದ ಹಣವನ್ನು ನಮಾಮಿ ಗಂಗೆ ಯೋಜನೆಗೆ ನೀಡಲು ನಿರ್ಧರಿಸಿದ್ದೇನೆ. ಈ ಪ್ರಶಸ್ತಿಯನ್ನು ದೇಶದ 140 ಕೋಟಿ ಜನರಿಗೆ ಅರ್ಪಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಹೇಳಿದರು.
ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ಲೋಕಮಾನ್ಯ ತಿಲಕರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ಅಲ್ಲದೆ, ಕಾರ್ಯಕ್ರಮ ಆರಂಭಕ್ಕೂ ಮುನ್ನ ಪುಣೆಯ ಶ್ರೀಮಂತ್ ದಗ್ದುಶೇತ್ ಹಲ್ವಾಯಿ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.
#WATCH| Maharashtra: Prime Minister Narendra Modi offers prayers at Shreemant Dagdusheth Halwai Mandir in Pune.pic.twitter.com/HKGXBWb8nd
— ANI (@ANI)August 1, 2023

ಪ್ರಶಸ್ತಿ ಪ್ರಧಾನಿ ಕಾರ್ಯಕ್ರಮದಲ್ಲಿ ಎನ್​ಸಿಪಿ ಪಕ್ಷದ ಮುಖ್ಯಸ್ಥ ಶರಾದ್​ ಪವರ್​, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್​ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.(ಏಜೆನ್ಸೀಸ್​)
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಬಿಎಂಟಿಸಿ! ಹೊಸ ಮಾರ್ಗದಲ್ಲಿ ಫೀಡರ್ ಬಸ್ ಸೇವೆ; ಇಲ್ಲಿದೆ ಪೂರ್ಣ ವಿವರ…

ನಾನು ಮತ್ತು ಸಿಎಂ ರಹಸ್ಯವಾಗಿ ಚರ್ಚೆ ನಡೆಸಿ ವರ್ಗಾವಣೆ ‌ಮಾಡಿದ್ದೇವೆ: ಸಚಿವ ಪರಮೇಶ್ವರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
