ಮುಂಬೈ:ಮಹಾರಾಷ್ಟ್ರದ ಥಾಣೆಯ ಖಾಸಗಿ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಈ ನೀಚಕೃತ್ಯವನ್ನು ಖಂಡಿಸಿ ಬದ್ಲಾಪುರ ರೈಲು ನಿಲ್ದಾಣದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ಹಿಂಸಾತ್ಮಾಕ ರೂಪಪಡೆದುಕೊಂಡ ಬಳಿಕ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದ ಪೊಲೀಸರ ಮೇಲೆ ನೆರೆದಿದ್ದ ಜನರು ಕಲ್ಲುತೂರಾಟ ನಡೆಸಿದ್ದಾರೆ. ಬದ್ಲಾಪುರ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಇದನ್ನು ಓದಿ:ಯುಪಿಎಸ್​​ಸಿ ಅಧ್ಯಕ್ಷರಿಗೆ ಪತ್ರ ಬರೆದ ಕೇಂದ್ರ ಸಚಿವ; ಉಲ್ಲೇಖಿಸಿರುವ ಅಂಶಗಳು ಹೀಗಿವೆ..
ಈಗಾಗಲೇ ಘಟನೆ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ನಿಜಕ್ಕೂ ಬೇಸರ ತರಿಸಿದೆ. ಶಾಲೆಯಲ್ಲಿ ಸಿಸಿಟಿವಿ ಕಾರ್ಯನಿರ್ವಹಿಸುತ್ತಿರಲಿಲ್ಲ ಎನ್ನಲಾಗುತ್ತಿದೆ. ಪುಣೆ ಮತ್ತು ಮುಂಬೈನ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಘಟನೆ ಬೆಳಕಿಗೆ ಬಂದ ನಂತರ ಶಾಲಾ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಇನ್ನಿಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಿದೆ ಎಂದು ವರದಿಯಾಗಿದೆ. ಆದರೆ ಈ ಘಟನೆಯ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದ್ದು ನೂರಾರು ಮಂದಿ ಜಮಾಯಿಸಿ ಆರೋಪಿಗಳಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಇಬ್ಬರು ಅಪ್ರಾಪ್ತೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶ ಹೊರಡಿಸಿದೆ. ಈ ಸಾಮಾಜಿಕ ಜಾಲತಾಣದಲ್ಲಿ ​ಮಾಡಿರುವ ಪೋಸ್ಟ್​​​ನಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​​ಇನ್​​ಸ್ಪೆಕ್ಟರ್​ ಜನರಲ್​ ಆಫ್​ ಪೊಲೀಸ್​​ ಆರತಿಸಿಂಗ್​​ ಅವರ ನೇತೃತ್ವದಲ್ಲಿ ಎಸ್​ಐಟಿ ತನಿಖೆ ನಡೆಯಲಿದೆ. ಶೀಘ್ರದಲ್ಲೆ ಕಠಿಣ ಶಿಕ್ಷೆ ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಯೋಜಿಸಲಾಗಿದೆ. ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಶಾಲೆಯನ್ನು ಸಹ ಹೊಣೆಗಾರರನ್ನಾಗಿ ಮಾಡುತ್ತೇವೆ. ತಪ್ಪಿತಸ್ಥರು ಯಾರನ್ನೂ ಬಿಡುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಹೇಳಿದ್ದಾರೆ. (ಏಜೆನ್ಸೀಸ್​​)
ರಾಹುಲ್​​ಗಾಂಧಿ ಪೌರತ್ವ ಕುರಿತು ಸುಬ್ರಮಣಿಯನ್​ ಸ್ವಾಮಿ ಸಲ್ಲಿಸಿದ್ದ ಅರ್ಜಿ; PIL ಎಂದು ಪರಿಗಣಿಸಿದ ನ್ಯಾಯಾಲಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 17 =
Remember me
