ಬುಲ್ಧಾನ:ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಮೃತಪಟ್ಟು, ಹಲವರು ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನದಲ್ಲಿ ನಡೆದಿದೆ.ಇದನ್ನೂ ಓದಿ:ನಿನ್ನೆ 46 ಇಂದು 100 ತಹಸೀಲ್ದಾರ್​ಗಳ ವರ್ಗಾವಣೆ: ಯಾರು, ಎಲ್ಲಿಗೆ? ಇಲ್ಲಿದೆ ಸಂಪೂರ್ಣ ಪಟ್ಟಿ….ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಮಲ್ಕಾಪುರ ಪಟ್ಟಣದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಮುಂಜಾನೆ 2.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಒಂದು ಬಸ್ ಅಮರನಾಥ ಯಾತ್ರೆಯಿಂದ ಹಿಂಗೋಲಿ ಜಿಲ್ಲೆಗೆ ಹಿಂತಿರುಗುತ್ತಿತ್ತು. ಇನ್ನೊಂದು ನಾಸಿಕ್​​ಗೆ ಹೋಗುತ್ತಿತ್ತು. ನಾಸಿಕ್ ಕಡೆಗೆ ಹೋಗುತ್ತಿದ್ದ ಬಸ್ಸು ಟ್ರಕ್​​ನ್ನು ಹಿಂದಿಕ್ಕಲು ಯತ್ನಿಸಿದ ವೇಳೆ ಎದುರಿಗೆ ಬಂದ ಬಸ್​​​ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಪರಿಣಾಮವಾಗಿ ಎರಡು ಬಸ್​ಗಳು ನಜ್ಜುಗುಜ್ಜಾಗಿದ್ದು, ನಾಲ್ಕೈದು ಜನರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ನಾಲ್ಕೈದು ಜನರ ಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
