ಕರೊನಾ ಸೋಂಕಿತನೊಂದಿಗೆಸಂಪರ್ಕ ಹಿನ್ನೆಲೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಭದ್ರತಾ ಪಡೆಯ 160 ಜನರನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿದೆ.
ಸಿಎಂ ನಿವಾಸ ಮಾತೋಶ್ರೀ ಸಮೀಪದಲ್ಲಿ ಚಹಾ ಮಾರುತ್ತಿದ್ದ ವ್ಯಕ್ತಿಯೊಬ್ಬನಲ್ಲಿ ಕರೊನಾ ಸೋಂಕು ಕಂಡು ಬಂದಿದೆ. ಈ ಹಿನ್ನೆಲೆಯ್ಲಲಿ ಸಿಎಂ ಭದ್ರತಾ ಪಡೆಯಲ್ಲಿ ಇದ್ದವರನ್ನು ಕ್ವಾರಂಟೇನ್​ಗೆ ಒಳಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಟವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಕಲಾನಗರದಲ್ಲಿರುವ ಬಾಳಾ ಠಾಕ್ರೆ ನಿವಾಸದ ಬಳಿ ಚಹಾ ಮಾರುತ್ತಿದ್ದ ವ್ಯಕ್ತಿಗೆ ಸೋಂಕು ಕಂಡು ಬಳಿಕ ಆತನನ್ನು ಬಾಂದ್ರಾದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈತನೊಂದಿಗೆ ಸಿಎಂ ಭದ್ರತಾ ದಳದ ಸಿಬ್ಬಂದಿ ಸಂಪರ್ಕಕ್ಕೆ ಬಂದಿರಬಹುದು. ಆ ಕಾರಣದಿಂದಾಗಿ 160 ಜನರನ್ನು ಕ್ವಾರಂಟೈನ್​ಗೆ ಗುರಿಪಡಿಸಲಾಗಿದೆ. ಇದರಿಂದ ಯಾರೂ ಆತಂಕ ಪಡಬೇಕಿಲ್ಲ. ಸಂಭಾವ್ಯ ಸೋಂಕು ಗುರುತಿಸಲು ನಿಗಾದಲ್ಲಿ ಇರಿಸುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ ಸಿಎಂ ಭದ್ರತೆಗೆ ಬೇರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ಅವರ ದೇಹದ ತಾಪಮಾನವನ್ನು ನಿತ್ಯವೂ ದಾಖಲಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಚಹಾ ಮಾರಾಟಗಾರನೊಂದಿಗೆ ಸಂಪರ್ಕವಿದ್ದ ಆರು ತಿಂಗಳ ಮಗುವನ್ನು ಐಸೋಲೇಷನ್​ ವಾರ್ಡ್​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.(ಏಜೆನ್ಸೀಸ್​)
ಲಾಕ್​ಡೌನ್​ ನಿಯಮ ಉಲ್ಲಂಘನೆಯನ್ನು ಪ್ರಶ್ನಿಸಿದ್ದಕ್ಕೆ ದುಷ್ಕರ್ಮಿಗಳಿಬ್ಬರಿಂದ ಪೊಲೀಸ್​ ಸಿಬ್ಬಂದಿಗೆ ಚಾಕು ಇರಿತ

ಲಾಕ್​ಡೌನ್​​ನಿಂದ ಬೀದಿಗೆ ಬಿದ್ದಿರುವ ಕೂಲಿ ಕಾರ್ಮಿಕರ ನೆರವಿಗೆ ಸರ್ಕಾರ ಧಾವಿಸಬೇಕು: ಮಾಜಿ ಸಿಎಂ ಎಚ್​ಡಿಕೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 + eight =
Remember me
