ಬೆಂಗಳೂರು:ಮಹಾರಾಷ್ಟ್ರ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಅವರು ಅಲ್ಲಿನ ಗೃಹ ಸಚಿವ ಅನಿಲ್ ದೇಶಮುಖ್ ಅವರ ಮೇಲೆ 100 ಕೋಟಿ ರೂಪಾಯಿ ವಸೂಲಿ ಆರೋಪ ಮಾಡಿರುವ ಕುರಿತಂತೆ ಬಿಜೆಪಿ ಮುಖಂಡ ಸಿಟಿ ರವಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಭಾನುವಾರ ಎಎನ್​ಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, ‘ಮಹಾರಾಷ್ಟ್ರದಲ್ಲಿರುವುದು ಮಹಾ ವಿಕಾಸ್ ಅಗಾಡಿ ಸರ್ಕಾರ ಇಲ್ಲ, ಅಲ್ಲಿರುವುದು ಮಹಾ ವಸೂಲಿ ಅಗಾಡಿ ಸರ್ಕಾರ’ ಎಂದು ವ್ಯಂಗ್ಯವಾಡಿದರು. ‘ಪರಮ್ ಬೀರ್ ಸಿಂಗ್ ಮಾಡಿರುವ ಆರೋಪ ಗಂಭೀರವಾದದ್ದು. ಈ ಕುರಿತು ಸಿಬಿಐ ತನಿಖೆ ಆಗಬೇಕು. ಕೂಡಲೇ ಗೃಹ ಮಂತ್ರಿ ಅನಿಲ್ ದೇಶಮುಖ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು’ ಎಂದು ರವಿ ಆಗ್ರಹಿಸಿದ್ದಾರೆ.
‘ಮುಂಬೈನಲ್ಲಿನ ಬಾರ್​, ರೆಸ್ಟೋರಂಟ್​ಗಳಿಂದ ಹಾಗೂ ಅಕ್ರಮ ವ್ಯವಹಾರಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿಯನ್ನು ಸಂಗ್ರಹಿಸಿ ಕೊಡಬೇಕು ಎಂದು ಗೃಹ ಸಚಿವ ಅನಿಲ್ ದೇಶಮುಖ್ ಅವರ ಸೂಚನೆ ಇತ್ತು’ ಎಂಬ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಹೇಳಿಕೆ ಇದೀಗ ಮಹಾರಾಷ್ಟ್ರ ರಾಜಕಾರಣದಲ್ಲಿ ಬಹುದೊಡ್ಡ ಬಿರುಗಾಳಿಯನ್ನೇ ಸೃಷ್ಟಿಸಿದೆ.
ಇದನ್ನೂ ಓದಿ:ಥೂ…ನನ್ನಷ್ಟು ದೊಡ್ಡ ಕತ್ತೆ ಯಾರೂ ಇಲ್ಲ… ನಾನೇ ದೊಡ್ಡ ಕತ್ತೆ… ಎಂದು ಹಣೆ ಚಚ್ಚಿಕೊಂಡ ಮಮತಾ ಬ್ಯಾನರ್ಜಿ!
ಮುಕೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಪತ್ತೆಯಾಗಿದ್ದರ ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಆರೋಪಿಸಿ ಮುಂಬೈ ಪೊಲೀಸ್ ಆಯುಕ್ತರಾಗಿದ್ದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಅವರನ್ನು ಮಹಾರಾಷ್ಟ್ರ ಗೃಹ ರಕ್ಷಕ ದಳದ ಮುಖ್ಯಸ್ಥರಾಗಿ ವರ್ಗಾಯಿಸಲಾಗಿತ್ತು.
ಇದರ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು ಆರೋಪ ಮಾಡಿರುವ ಪರಮ್ ಬೀರ್ ಸಿಂಗ್, ‘ಒಂದು ತಿಂಗಳಿಗೆ ನೂರು ಕೋಟಿ ರೂ ಲಂಚ ಸಂಗ್ರಹಿಸುವಂತೆ ಗೃಹ ಸಚಿವ ಅನಿಲ್ ದೇಶಮುಖ್ ಅವರು ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರಿಗೆ ಸೂಚನೆ ನೀಡಿದ್ದರು. ಈ ಗುರಿ ತಲುಪಲು ಮುಂಬೈನಲ್ಲಿ 1750 ಬಾರ್ ರೆಸ್ಟೋರಂಟ್​ಗಳಿವೆ. ಸರಿಯಾಗಿ ಕೆಲಸ ಮಾಡಿದರೆ 100 ಕೋಟಿ ಬರುತ್ತೆ. ಪ್ರತಿಯೊಂದರಿಂದಲೂ 2 ರಿಂದ 3 ಲಕ್ಷ ಸಂಗ್ರಹಿಸಿದರೆ 45 ರಿಂದ 50 ಕೋಟಿ ರೂಪಾಯಿ ಆಗುತ್ತದೆ. ಉಳಿದಿದ್ದನ್ನು ಇನ್ನಿತರ ಮೂಲಗಳಿಂದ ಸಂಗ್ರಹಿಸಬಹುದು ಎಂದು ವಾಜೆಗೆ ಸೂಚನೆ ನೀಡಿದ್ದರು’ ಎಂದು ಪತ್ರದಲ್ಲಿ ಸಿಂಗ್ ಉಲ್ಲೇಖಿಸಿದ್ದಾರೆ. ಅಲ್ಲದೇ ಸಿಂಗ್ ಅವರು ಪತ್ರವನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ರಾಜ್ಯಪಾಲ ಭಗತ್​ಸಿಂಗ್ ಕೋಶಾಯಾರಿ ಅವರಿಗೂ ತಲುಪಿಸಿದ್ದರು.
ಬಾಂಬ್​ ಸ್ಫೋಟದಲ್ಲೂ ಆರೋಪಿ; ಆತ್ಮಹತ್ಯೆ ಕೇಸ್, ಭ್ರಷ್ಟಾಚಾರದಲ್ಲೂ ಹೆಸರು ! ಗೃಹ ಸಚಿವ ಸ್ಥಾನಕ್ಕೆ ಬಂತಾ ಕುತ್ತು?

ಪರಮ್ ಬೀರ್ ಸಿಂಗ್ 100 ಕೋಟಿ ಹೇಳಿಕೆ: ‘ಮಹಾ’ ರಾಜಕಾರಣದಲ್ಲಿ ಎದ್ದಿದೆ ಮಹಾ ಬಿರುಗಾಳಿ! ಫುಲ್ ಡಿಟೈಲ್ಸ್ ಇಲ್ಲಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 13 =
Remember me
