– ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆಯಲಿದೆ ಅಂತ್ಯಸಂಸ್ಕಾರಕೊಲ್ಲಾಪುರ: ಲೇಖಕ ಮತ್ತು ಮಹಾತ್ಮಾ ಗಾಂಧಿಯವರ ಮೊಮ್ಮಗ ಅರುಣ್ ಮಣಿಲಾಲ್ ಗಾಂಧಿ ಇಂದು ಬೆಳಿಗ್ಗೆ ಅನಾರೋಗ್ಯದಿಂದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ.
ಅರುಣ್ ಮಣಿಲಾಲ್ ಗಾಂಧಿ (89) ಮಂಗಳವಾರ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ವಿಧಿವಶರಾದರು. ವಯೋಸಹಜವಾಗಿ ಅಲ್ಪಕಾಲದ ಅನಾರೋಗ್ಯದಿಂದ ಅವರು ಬಳಲಿದ್ದರು. ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.
ಇದನ್ನೂ ಓದಿ:Congress Manifesto 2023: ಬಿಜೆಪಿ ಜಾರಿಗೆ ತಂದ ಕಾನೂನುಗಳು ಒಂದು ವರ್ಷದೊಳಗೆ ರದ್ದು , ಭಜರಂಗದಳ ನಿಷೇಧ!
ಅರುಣ್‌ ಗಾಂಧಿ ಅವರು ಮಣಿಲಾಲ್‌ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಯ ಪುತ್ರ. ಮಣಿಲಾಲ್ ಗಾಂಧಿ ಅವರು ಮಹಾತ್ಮ ಗಾಂಧಿಯವರ ಎರಡನೇ ಮಗ. ಅರುಣ್‌ ಗಾಂಧಿ 14 ಏಪ್ರಿಲ್ 1934 ರಂದು ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ಜನಿಸಿದರು.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
ಅರುಣ್‌ ಗಾಂಧಿ ಅವರ ತಂದೆ ಇಲ್ಲಿ ಪ್ರಕಟವಾಗುತ್ತಿದ್ದ ಇಂಡಿಯನ್ ಒಪಿನಿಯನ್ ಪತ್ರಿಕೆಯ ಸಂಪಾದಕರಾಗಿದ್ದರೆ, ಅವರ ತಾಯಿ ಅದೇ ಪತ್ರಿಕೆಯಲ್ಲಿ ಪ್ರಕಾಶಕರಾಗಿದ್ದರು. ಅರುಣ್ ಗಾಂಧಿ ನಂತರ ತಮ್ಮ ಅಜ್ಜನ ಮಾರ್ಗವನ್ನು ಅನುಸರಿಸಿದರು ಮತ್ತು ಸಾಮಾಜಿಕ-ರಾಜಕೀಯ ವಿಷಯಗಳಲ್ಲಿ ಕಾರ್ಯಕರ್ತರಾಗಿ ಕೆಲಸ ಮಾಡಿದರು. ಹೀಗೆ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ.
ಪಿಎಫ್​ಐ ನಿಷೇಧಕ್ಕೆ ಪ್ರತೀಕಾರ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ!: ಹಿಮಂತ ಬಿಸ್ವಾ ಶರ್ಮಾ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 8 =
Remember me
