ನವದೆಹಲಿ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತೀವ್ರ ಹಿನ್ನಡೆಯಾಗಿದ್ದು, 2024ರ ಲೋಕಸಭೆ ಚುನಾವಣೆಗೂ ಮುನ್ನ ಪಕ್ಷ ಸಂಘಟನೆ ನಿಟ್ಟಿನಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ.
ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಗಳನ್ನು ಬದಲಾವಣೆ ಮಾಡಿ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. ಉತ್ತರಪ್ರದೇಶದ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಪ್ರಿಯಾಂಕ ಗಾಂಧಿ ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದ್ದು, ಅವರ ಬದಲಿಗೆ ಅವಿನಾಶ್​ ಪಾಂಡೆ ಅವರನ್ನು ನೇಮಿಸಲಾಗಿದೆ.
Congress President Shri@khargehas assigned the organisational responsibilities to the following persons with immediate effect.pic.twitter.com/qWhwiJzysj
ಸಚಿನ್ ಪೈಲಟ್ ಅವರನ್ನು ಛತ್ತೀಸ್​ಗಢ, ರಮೇಶ್ ಚೆನ್ನಿಥಾಲಾ ಅವರನ್ನು ಮಹಾರಾಷ್ಟ್ರ, ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಕರ್ನಾಟಕ, ದೀಪಕ್ ಬಾಬರಿಯಾ ದೆಹಲಿ ಮತ್ತು ಹರಿಯಾಣ, ಉತ್ತರಾಖಂಡದ ಉಸ್ತುವಾರಿಯಾಗಿ ಕುಮಾರಿ ಸೆಲ್ಜಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಜಿಎ ಮಿರ್, ದೀಪಾ ದಾಸ್ ಮುನ್ಷಿ ಅವರನ್ನು ಕೇರಳ, ಲಕ್ಷದ್ವೀಪ ಮತ್ತು ತೆಲಂಗಾಣದ ಉಸ್ತುವಾರಿಯಾಗಿ ಎಐಸಿಸಿ ನೇಮಿಸಿದೆ.
ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಸಂವಹನ ಉಸ್ತುವಾರಿ ವಹಿಸಲಿದ್ದು, ಕೆ.ಸಿ.ವೇಣುಗೋಪಾಲ್ ಅವರು ಸಂಘಟನೆಗಳ ನೇತೃತ್ವ ವಹಿಸಲಿದ್ದಾರೆ. ಗುರ್ದೀಪ್​​ ಸಿಂಗ್ ಸಪ್ಪಲ್ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ ಎಂದು ಎಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + eight =
Remember me
