ನವದೆಹಲಿ:ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಕೆಲವು ರೈತ ಪರ ಸಂಘಟನೆಗಳು ಬಹುತೇಕ, ಪಂಜಾಬ್​, ಹರಿಯಾಣದ ಸಂಘಟನೆಗಳವರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 8ರ ಬಂದ್​ಗೆ ಪ್ರಮುಖ ರೈತ ಸಂಘಟನೆಗಳು ಬೆಂಬಲ ನೀಡಿಲ್ಲ. ವಿದೇಶಿ ಶಕ್ತಿಗಳು ಆಂದೋಲದನ ಹಾದಿಯನ್ನು ತಪ್ಪಿಸಲೆತ್ನಿಸುತ್ತಿವೆ ಎಂದು ದೇಶದ ಪ್ರಮುಖ ರೈತ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಭಾರತೀಯ ಕಿಸಾನ್ ಸಂಘ (ಬಿಕೆಎಸ್​)ದ ರಾಷ್ಟ್ರೀಯ ಕಾರ್ಯದರ್ಶಿ ಮೋಹಿನಿ ಮಿಶ್ರಾ ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ರೈತರ ಪ್ರತಿಭಟನೆಯ ಹಾದಿ ತಪ್ಪಿಸುವ ಕೆಲಸವನ್ನು ವಿದೇಶಿ ಶಕ್ತಿಗಳು ಮತ್ತು ರಾಜಕೀಯ ಪಕ್ಷಗಳು ಮಾಡುತ್ತಿವೆ. ಲಂಡನ್ ಮತ್ತು ಕೆನಡಾಗಳಲ್ಲಿ ನಡೆದ ಪ್ರತಿಭಟನೆಗಳು ಇದನ್ನು ಸ್ಪಷ್ಟಪಡಿಸುತ್ತವೆ. ಕೃಷಿ ಕಾನೂನು ರಚನೆ ಆಗಿರುವುದು ರೈತಪರ ಹಿತದೃಷ್ಟಿಯಿಂದಲೇ ಹೊರತು ಬೇರಾವ ಉದ್ದೇಶದಿಂದಲೂ ಅಲ್ಲ.ಈ ಕಾನೂನುಗಳಲ್ಲಿ ತಿದ್ದುಪಡಿ ಆಗಬೇಕಾಗಿರುವುದು ನಿಜ. ಆದರೆ, ಪೂರ್ತಿಯಾಗಿ ಕಾನೂನು ಹಿಂಪಡೆಯಬೇಕೆಂಬ ವಾದ, ಬೇಡಿಕೆಯನ್ನು ಒಪ್ಪಲಾಗದು.ಭಾರತ್​ ಬಂದ್​ಗೆ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಪತ್ನಿಯ ಮೇಲಿನ ಸಿಟ್ಟಿನಿಂದ 450 ಕಿ.ಮೀ ನಡೆದ ಪತಿರಾಯ ಪೊಲೀಸರಿಂದ ದಂಡ ಹಾಕಿಸಿಕೊಂಡ!
ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಗೆ ಯಾವುದೇ ಮಾರುಕಟ್ಟೆಯಲ್ಲೂ ಕೃಷಿ ಉತ್ಪನ್ನ ಖರೀದಿಯಾಗಬಾರದು.ಸರ್ಕಾರದ ಪೋರ್ಟಲ್​ಗಳಲ್ಲಿ ಖರೀದಿದಾರರ ಸಂಪೂರ್ಣ ವಿವರ ಲಭ್ಯ ಇರಬೇಕು. ಕೃಷಿ ನ್ಯಾಯಾಧಿಕರಣ ರಚನೆಯಾಗಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.(ಏಜೆನ್ಸೀಸ್)
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ದೆಹಲಿಯಲ್ಲಿ ಐವರು ಶಂಕಿತ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶಕ್ಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + 11 =
Remember me
