ನವದೆಹಲಿ: ಕರೊನಾ ನಿಯಂತ್ರಿಸಲು ಸೂಕ್ತವಾದ ಔಷಧ ಹಾಗೂ ಆಮ್ಲಜನಕ ಪೂರೈಕೆ ಹಾಗೂ ಲಸಿಕೆ ವಿತರಣೆ ವಿಧಾನ ಕುರಿತು ರಾಷ್ಟ್ರೀಯ ಯೋಜನೆ ರೂಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಗುರುವಾರ ತಾಕೀತು ಮಾಡಿದೆ. ಕೋವಿಡ್ ರೋಗಿಗಳ ಪ್ರಾಣ ಉಳಿಸುವುದಕ್ಕೆ ಅಗತ್ಯವಾದ ಆಮ್ಲಜನಕ ಸರಬರಾಜಿಗೆ ಸರಿಯಾದ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದೆ. ದೇಶದಲ್ಲಿ ಮೆಡಿಕಲ್ ಆಕ್ಸಿಜನ್ ತತ್ವಾರ ಉಂಟಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್.ಎ. ಬೊಬ್ಡೆ ನೇತೃತ್ವದ ಪೀಠ, ಈ ಸಂಬಂಧ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಲಾಕ್​ಡೌನ್ ಹೇರುವ ಅಧಿಕಾರ ರಾಜ್ಯಗಳಿಗೆ ಇರಬೇಕು ಎಂದು ಹೇಳಿರುವ ನ್ಯಾಯಪೀಠ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.
ಆಕ್ಸಿಜನ್, ಬೆಡ್ ಮತ್ತು ವೈರಲ್ ತಡೆಗೆ ಬಳಕೆಯಾಗುತ್ತಿರುವ ರೆಮ್​ಸಿವಿರ್ ಕೊರತೆಯನ್ನೊಳಗೊಂಡ ಬಿಕ್ಕಟ್ಟಿನ ಬಗ್ಗೆ ಆರು ಹೈಕೋರ್ಟ್​ಗಳಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಸವೋನ್ನತ ನ್ಯಾಯಾಲಯವೂ ಮಧ್ಯ ಪ್ರವೇಶ ಮಾಡಿರುವುದು ಮಹತ್ವದ ವಿದ್ಯಮಾನವಾಗಿದೆ. ದೆಹಲಿ, ಬಾಂಬೆ, ಸಿಕ್ಕಿಂ, ಮಧ್ಯಪ್ರದೇಶ, ಕಲ್ಕತ್ತ ಮತ್ತು ಅಲಹಾಬಾದ್ ಹೈ ಕೋರ್ಟ್​ಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಗಣನೆಗೆ ತೆಗೆದುಕೊಂಡಿದೆ. ಪ್ರಾಣ ವಾಯು ಪೂರೈಕೆ ವಿಚಾರದಲ್ಲಿ ಅನೇಕ ರಾಜ್ಯಗಳು ಕೇಂದ್ರವನ್ನು ದೂರುತ್ತಿರುವುದಲ್ಲದೆ ಹಲವು ರಾಜ್ಯಗಳು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ.
ದೆಹಲಿಗೆ ಸುಗಮ ಪೂರೈಕೆ: ದೆಹಲಿಗೆ ಮಂಜೂರಾಗಿರುವ ವೈದ್ಯಕೀಯ ಆಮ್ಲಜನಕವನ್ನು ಸುಗಮವಾಗಿ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ದೆಹಲಿ ಹೈ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆಮ್ಲಜನಕ ಸರಬರಾಜು ತಪ್ಪಿದರೆ ಕ್ರಿಮಿನಲ್ ಖಟ್ಲೆ ಎದುರಿಸಬೇಕಾದೀತು ಎಂದು ಪೀಠ ಎಚ್ಚರಿಸಿದೆ. ಕೇಂದ್ರ ಸರ್ಕಾರ ಆಕ್ಸಿಜನ್ ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ರೀತಿಗೆ ಬುಧವಾರ ಆಘಾತ ಮತ್ತು ಅತೃಪ್ತಿ ವ್ಯಕ್ತಪಡಿಸಿದ್ದ ಹೈ ಕೋರ್ಟ್, ಜನರು ಸರ್ಕಾರವನ್ನಷ್ಟೇ ಅವಲಂಬಿಸಿದ್ದಾರೆ. ಆಕ್ಸಿಜನ್ ಪೂರೈಸುವುದು ಸರ್ಕಾರದ ಜವಾಬ್ದಾರಿ’ ಎಂದು ಹೇಳಿತ್ತು.
ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ತಪರಾಕಿ: ಕೋವಿಡ್ ಸೋಂಕು ಹೆಚ್ಚಳ, ಆಕ್ಸಿಜನ್ ಕೊರತೆ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬಾಂಬೆ ಹೈಕೋರ್ಟ್, ಮನೆ ಮನೆಗೆ ತೆರಳಿ ಹಿರಿಯ ನಾಗರಿಕರಿಗೆ ಲಸಿಕೆ ನೀಡಿದ್ದರೆ 2ನೇ ಅಲೆ ಇಷ್ಟು ವಿಪರೀತವಾಗುತ್ತಿರಲಿಲ್ಲ ಎಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − one =
Remember me
