ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿನ್ನೆ 77ನೇ ಸ್ವಾತಂತ್ರ್ಯ ದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. ಆದರೆ ರೆಕಾರ್ಡೆಡ್ ಸಂದೇಶವೊಂದನ್ನು ಸಾಮಾಜಿಕ ಮಾಧ್ಯಮ ‘X’ನಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಅವರು ಹಿಂದಿನ ಪ್ರಧಾನ ಮಂತ್ರಿಗಳ ಪಾತ್ರವನ್ನು ಎತ್ತಿ ತೋರಿಸಿದ್ದು, ಜತೆಗೆ ಪ್ರಸ್ತುತ ಸರ್ಕಾರ ವಿರೋಧ ಪಕ್ಷಗಳನ್ನು ತುಳಿಯುತ್ತಿದೆ ಆರೋಪಿಸಿದರು.
ಇದನ್ನೂ ಓದಿ:ಪ್ರಧಾನಿ ಮೋದಿ 2024ಕ್ಕೆ ಅವರ ಮನೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಟೀಕೆ
ಪ್ರಧಾನಿ ಮೋದಿ, ಐತಿಹಾಸಿಕ ಕೆಂಪು ಕೋಟೆಯಲ್ಲಿ ಭಾಷಣ ಮಾಡುತ್ತಿದ್ದಂತೆಯೇ, ಒಂದು ಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿನ ಕುರ್ಚಿ ಖಾಲಿಯಾಗಿರುವುದು ಕಂಡುಬಂದಿತ್ತು. ವಿರೋಧ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೊದಲ ಬಾರಿಗೆ ಪಕ್ಷದ ಅಧ್ಯಕ್ಷರಾಗಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜವನ್ನು ಹಾರಿಸಿದ್ದಾರೆ. ಅವರು ತಮ್ಮ ಭಾಷಣದಲ್ಲಿ ಸರ್ಕಾರದ ಮೇಲೆ ದಾಳಿ ಮಾಡಿದರು. ಕಾಂಗ್ರೆಸ್ ಸಾಂಪ್ರದಾಯಿಕವಾಗಿ ಸ್ವಾತಂತ್ರ್ಯ ದಿನದಂದು ಯಾವುದೇ ಟೀಕೆಗಳನ್ನು ಅಥವಾ ವಾಗ್ದಾಳಿಗಳನ್ನು ತಪ್ಪಿಸಿದೆ ಎಂದು ಪಕ್ಷ ತಿಳಿಸಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕಣ್ಣಿನ ಸಮಸ್ಯೆ ಹೊಂದಿದ್ದರಿಂದ ಕೆಂಪುಕೋಟೆಗೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದರು. ಅವರು ತಮ್ಮ ಮನೆಯಲ್ಲಿ ಹಾಗೂ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜವನ್ನು ಹಾರಿಸಿದ್ದಾರೆ ಎಂದು ವರದಿಯಾಗಿದೆ. “ಪ್ರಧಾನಮಂತ್ರಿಗೆ ತುಂಬಾ ಭದ್ರತೆ ಇರುತ್ತದೆ. ಗೃಹ ಮಂತ್ರಿ, ರಕ್ಷಣಾ ಸಚಿವರು ಮತ್ತು ಸ್ಪೀಕರ್ ಕಾರ್ಯಕ್ರಮದಿಂದ ಹೊರಡುವವರೆಗೂ ನಮಗೆ ಹೊರಡಲು ಅನುಮತಿ ನೀಡುವುದಿಲ್ಲ. ಆದ್ದರಿಂದ ಕಾರ್ಯಕ್ರಮಕ್ಕೆ ಹಾಜರಾಗುವುದು ಅಸಾಧ್ಯವಾಗುತ್ತಿತ್ತು” ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.
ಇದನ್ನೂ ಓದಿ: ಮಲ್ಲಿಕಾರ್ಜುನMallikarjun Kharge Hits Back At Araga Jnanendra | ಆರಗ ಜ್ಞಾನೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಮಲ್ಲಿಕಾರ್ಜುನ ಖರ್ಗೆ
ಅವರ ವಿಡಿಯೋ ಸಂದೇಶದಲ್ಲಿ, ಮಲ್ಲಿಕಾರ್ಜುನ ಖರ್ಗೆ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಾಯ್ ಪಟೇಲ್, ನೆತಾಜಿ ಸುಭಾಶ್ ಚಂದ್ರ ಬೋಸ್, ಮೌಲಾನಾ ಅಜಾದ್, ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು, ಬಿಆರ್ ಅಂಬೆಡ್ಕರ್ ಸೇರಿದಂತೆ ಅನೇಕ ಹೋರಾಟಗಾರರನ್ನು ನೆನೆದರು.
ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸೇರುದಂತೆ ಇತರ ಕಾಂಗ್ರೆಸ್ ಪ್ರಧಾನಮಂತ್ರಿಗಳಾದ ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರೀ, ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮನ್‍ಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಅವರು ಈ ಸಂದರ್ಭ ಬಿಜೆಪಿಯ ಐಕಾನ್ ಅಟಲ್ ಬಿಹಾರಿ ವಾಜಪೇಯಿ ಹೆಸರನ್ನೂ ಉಲ್ಲೇಖಿಸಿದ್ದಾರೆ.
आप सभी को स्वतंत्रता दिवस की हार्दिक शुभकामनाएँ व बधाई।लोकतंत्र और संविधान हमारी देश की आत्मा है।हम यह प्रण लेते हैं कि हम देश की एकता और अखंडता के लिये, प्रेम और भाईचारे के लिए, सौहार्द और सद्भाव के लिए लोकतंत्र और संविधान की स्वतंत्रता क़ायम रखेंगे।जय हिन्द 🇮🇳pic.twitter.com/d5EurpcRNM— Mallikarjun Kharge (@kharge)August 15, 2023
आप सभी को स्वतंत्रता दिवस की हार्दिक शुभकामनाएँ व बधाई।लोकतंत्र और संविधान हमारी देश की आत्मा है।हम यह प्रण लेते हैं कि हम देश की एकता और अखंडता के लिये, प्रेम और भाईचारे के लिए, सौहार्द और सद्भाव के लिए लोकतंत्र और संविधान की स्वतंत्रता क़ायम रखेंगे।जय हिन्द 🇮🇳pic.twitter.com/d5EurpcRNM
ಇದನ್ನೂ ಓದಿ:ನಮ್ಮ ಮೈತ್ರಿಕೂಟಕ್ಕೆ I.N.D.I.A ಅಂತ ನಾಮಕರಣ ಮಾಡಿದ್ದೇವೆ: ಮಲ್ಲಿಕಾರ್ಜುನ ಖರ್ಗೆ
“ಪ್ರತಿಯೊಬ್ಬ ಪ್ರಧಾನ ಮಂತ್ರಿ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿದ್ದಾರೆ. ಇಂದು ಕೆಲವು ಜನರು ಕಳೆದ ಕೆಲವು ವರ್ಷಗಳಲ್ಲಿ ಮಾತ್ರವೇ ಭಾರತ ಅಭಿವೃದ್ಧಿ ಕಂಡಿದೆ ಎಂದು ಹೇಳಲು ಪ್ರಯತ್ನಿಸುತ್ತಾರೆ “ಎಂದು ಕಾಂಗ್ರೆಸ್ ಅಧ್ಯಕ್ಷರು ಕಿಡಿಕಾರಿದರು.
“ಅಟಲ್ ಬಿಹಾರಿ ವಾಜಪೇಯ್ ಸೇರಿದಂತೆ, ಪ್ರತಿಯೊಬ್ಬ ಪ್ರಧಾನಮಂತ್ರಿ ರಾಷ್ಟ್ರದ ಬಗ್ಗೆ ಯೋಚಿಸಿ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಂಡರು. ಇಂದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸ್ವಾಯತ್ತ ಸಂಸ್ಥೆಗಳು ಗಂಭೀರ ಅಪಾಯದಲ್ಲಿದೆ ಎಂದು ನಾನು ನೋವಿನಿಂದ ಹೇಳುತ್ತಿದ್ದೇನೆ. ಪ್ರತಿಪಕ್ಷದ ಧ್ವನಿಯನ್ನು ನಿಗ್ರಹಿಸಲು ಹೊಸ ಸಾಧನಗಳನ್ನು ಬಳಸಲಾಗುತ್ತಿದೆ. ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ದಾಳಿಗಳು ಮಾತ್ರವಲ್ಲ, ಚುನಾವಣಾ ಆಯೋಗವೂ ದುರ್ಬಲಗೊಳ್ಳುತ್ತಿದೆ. ಪ್ರತಿಪಕ್ಷ ಸಂಸದರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಅವರನ್ನು ಅಮಾನತುಗೊಳಿಸಲಾಗಿದೆ. ಮೈಕ್ ಮ್ಯೂಟ್ ಮಾಡಲಾಗುತ್ತಿದೆ” ಎಂದರು.
ಇದನ್ನೂ ಓದಿ:VIDEO| ಮಣಿಪುರ ಗಲಭೆ ಕುರಿತು ಪ್ರಧಾನಿ ಮೋದಿ ಮೌನವಾಗಿದ್ದೇಕೆ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ( IIT ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ( IIMs ), AIIMS, ಬಾಹ್ಯಾಕಾಶ ಮತ್ತು ಪರಮಾಣು ಸಂಶೋಧನೆಯು ಪ್ರಗತಿಯ ಸಂಕೇತಗಳಾಗಿ ಪ್ರಸ್ತುತ ಸರ್ಕಾರವು ದುರ್ಬಲಗೊಳಿಸಿದೆ ಎಂದು ಅವರು ಹೇಳಿದರು. ನೆಹರು, ಸ್ವತಂತ್ರ ಭಾರತದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉತ್ತೇಜಿಸಿದರು. ಲಾಲ್ ಬಹದ್ದೂರ್ ಶಾಸ್ತ್ರೀ ಮತ್ತು ಇಂದಿರಾ ಗಾಂಧಿಯವರ ನೀತಿಗಳು ಭಾರತವು ಆತ್ಮನಿರ್ಭರ್ ಅಥವಾ ಸ್ವಾವಲಂಬಿ ಆಗಲು ಸಹಾಯ ಮಾಡಿತು ಎಂದು ಅವರು ಹೇಳಿದರು.(ಏಜೆನ್ಸೀಸ್)
ಕೇಂಬ್ರಿಡ್ಜ್ ಯುನಿವರ್ಸಿಟಿಯಲ್ಲಿ ‘ನಾನು ಪ್ರಧಾನಿಯಾಗಿ ಬಂದಿಲ್ಲ, ಹಿಂದೂ ಆಗಿ ಬಂದಿದ್ದೇನೆ’ ಎಂದ ರಿಷಿ ಸುನಕ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eight =
Remember me
