ನವದೆಹಲಿ:ಹಾಲಿ ನಡೆಯುತ್ತಿರುವ ಬಜೆಟ್​ ಅಧಿವೇಶನದಲ್ಲಿ ಮಸೂದೆಗಳನ್ನು ತರಾತುರಿಯಲ್ಲಿ ಮಂಡಿಸಲಾಗುತ್ತಿದೆ. ಸದನದಲ್ಲಿ ಸರಿಯಾದ ಚರ್ಚೆಗೆ ಅವಖಾಶ ನೀಡುತ್ತಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ನಿವೃತ್ತರಾಗಲಿರುವ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯಲ್ಲಿ ದೇಶವು ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ ಎಂದು ಹೇಳಿದ್ದಾರೆ.
ಸದನದಲ್ಲಿ ಸರಿಯಾದ ಚರ್ಚೆ ಮಾಡದೆ ಮಸೂದೆಗಳನ್ನು ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ಮೇಲ್ಮನೆಯಲ್ಲಿ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರಿಗೆ ಸಾಕಷ್ಟು ಸಮಯ ನೀಡಲಾಗುತ್ತಿಲ್ಲ. ಪ್ರತಿಪಕ್ಷದ ಸದಸ್ಯರನ್ನು ಅಮಾನತು ಮಾಡುವ ಮೂಲಕ ಸದನದಲ್ಲಿ ವಿಧೇಯಕಗಳನ್ನು ಅಂಗೀಕರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
मोदी सरकार लोगों को डरा-धमकाकर पैसा वसूल रही है।यह पैसा लोकतंत्र को खत्म करने के लिए इस्तेमाल किया जा रहा है।इसी तरह से उन्होंने विपक्ष के 411 विधायकों को अपनी तरफ कर लिया।: कांग्रेस अध्यक्ष श्री@kharge#10SaalAnyayKaalpic.twitter.com/FHCqxRLPmk
ಇದನ್ನೂ ಓದಿ:ಒಂದು ಕಾಲದಲ್ಲಿ ಅಸಿಸ್ಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ನಟ ಇಂದು 2900 ಕೋಟಿ ರೂ. ಒಡೆಯ
ದಯವಿಟ್ಟು ತರಾತುರಿಯಲ್ಲಿ ಮಸೂದೆಗಳನ್ನು ಅಂಗೀಕರಿಸಬೇಡಿ. ವಿಧೇಯಕಗಳ ಬಗ್ಗೆ ಸರಿಯಾದ ಚರ್ಚೆ ನಡೆಯದೆ, ಕಾನೂನುಗಳಲ್ಲಿ ತಪ್ಪುಗಳಾಗುವ ಸಾಧ್ಯತೆಗಳಿವೆ. ಅವುಗಳನ್ನು ಸರಿಪಡಿಸಲು ನಂತರ ತಿದ್ದುಪಡಿಗಳನ್ನು ತರಲಾಗುತ್ತಿದೆ ಎಂದು ಹೇಳಿದ್ದಾರೆ.
ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯಲ್ಲಿ ದೇಶವು ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ. ಸಿಂಗ್, ಆಹಾರ ಕಾನೂನು ಮತ್ತು ಮಾಹಿತಿ ಹಕ್ಕು ಸೇರಿದಂತೆ ತಮ್ಮ ಅಧಿಕಾರಾವಧಿಯಲ್ಲಿ ಅಂಗೀಕರಿಸಿದ ವಿವಿಧ ಪ್ರಮುಖ ಮಸೂದೆಗಳನ್ನು ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
