ನವದೆಹಲಿ:ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ ಮುಂದುವರಿಯುವ ಸಾಧ್ಯತೆಯಿದೆ. ಈ ಸ್ಥಾನಕ್ಕೆ ಬೇರೆ ಯಾರನ್ನೂ ಇದುವರೆಗೆ ಗುರುತಿಸದಿರುವುದರಿಂದ ‘ಒಬ್ಬ ವ್ಯಕ್ತಿ-ಒಂದು ಹುದ್ದೆ’ ಎಂಬ ಪಕ್ಷದ ನಿಯಮವನ್ನು ಕೈಬಿಟ್ಟಂತೆ ಆಗಲಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಕ್ಷದ ಅಧ್ಯಕ್ಷ ಸ್ಥಾನವನ್ನೂ ಬಯಸಿದ್ದಾಗ ಒಬ್ಬ ವ್ಯಕ್ತಿ ಎರಡು ಹುದ್ದೆಗಳಲ್ಲಿ ಇರುವಂತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಬಲವಾಗಿ ಪ್ರತಿಪಾದಿಸಿ ಗೆಹ್ಲೋಟ್ ಆಸೆಗೆ ತಣ್ಣೀರೆರಚಿದ್ದರು. ಈ ನೀತಿಯ ಫಲವಾಗಿ ಗೆಹ್ಲೋಟ್ ಪಕ್ಷಾಧ್ಯಕ್ಷ ಹುದ್ದೆಯ ಆಸೆಯನ್ನು ತೊರೆದು ಸ್ಪರ್ಧಿಸಿರಲಿಲ್ಲ. ಖರ್ಗೆ ಮತ್ತು ಶಶಿ ತರೂರ್ ಕಣದಲ್ಲಿದ್ದು ರಾಜ್ಯಸಭೆ ಸದಸ್ಯರೂ ಆಗಿರುವ ಖರ್ಗೆ ಕಾಂಗ್ರೆಸ್ ಸಾರಥಿಯಾಗಿ ಇತ್ತೀಚೆಗೆ ಆಯ್ಕೆಯಾಗಿದ್ದರು.
ಪಕ್ಷದ ನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್ ಸಂಸದೀಯ ಪಕ್ಷದ ‘ಕಾರ್ಯತಂತ್ರ ಗುಂಪಿನ’ ಸಭೆಯನ್ನು ಶನಿವಾರ ಕರೆದಿದ್ದಾರೆ. ರಾಜ್ಯಸಭೆಯಿಂದ ಖರ್ಗೆ, ಜೈರಾಮ್ ರಮೇಶ್ ಮತ್ತು ಕೆ.ಸಿ. ವೇಣುಗೋಪಾಲ್​ರನ್ನು ಮಾತ್ರವೇ ಸಭೆಗೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಖರ್ಗೆ ಸ್ಥಾನಕ್ಕೆ ಬದಲಿಯಾಗಿ ಮುಂಚೂಣಿಯಲ್ಲಿರುವ ದಿಗ್ವಿಜಯ್ ಸಿಂಗ್ ಮತ್ತು ಪಿ. ಚಿದಂಬರಂರಿಗೆ ಆಹ್ವಾನ ನೀಡಲಾಗಿಲ್ಲ. ಕಾಂಗ್ರೆಸ್ ಮುಖ್ಯಸ್ಥರ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಖರ್ಗೆ ಸಂಸತ್ತಿನ ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಚಳಿಗಾಲದ ಅಧಿವೇಶನದವರೆಗೆ ಖರ್ಗೆಯವರೇ ಆ ಹುದ್ದೆಯಲ್ಲಿ ಮುಂದುವರಿಯುವ ಸಂಭವವಿದೆ ಎಂದು ಮೂಲಗಳು ಹೇಳಿವೆ. ಸಂಕ್ಷಿಪ್ತ ಅವಧಿಯ ಅಧಿವೇಶನ ಮುಗಿದ ನಂತರ ಸಂಸದೀಯ ಪಕ್ಷದ ಪುನಾರಚನೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
ಕಾಂಗ್ರೆಸ್​ನ ಇನ್ನೂ ಇಬ್ಬರು ಮುಖಂಡರು ‘ಒಬ್ಬ ವ್ಯಕ್ತಿ-ಒಂದು ಹುದ್ದೆ’ ನಿಯಮದಿಂದ ವಿನಾಯಿತಿ ಪಡೆದಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಪಕ್ಷದ ಬಂಗಾಳ ಘಟಕದ ಅಧ್ಯಕ್ಷರೂ ಆಗಿದ್ದಾರೆ. ರಾಜ್ಯಸಭೆಯ ಮುಖ್ಯ ಸಚೇತಕ ಆಗಿರುವ ಜೈರಾಮ್ ರಮೇಶ್, ಕಾಂಗ್ರೆಸ್​ನ ಸಂವಹನ ವಿಭಾಗದ ಮುಖ್ಯಸ್ಥರೂ ಹೌದು.
ನೂರು ಶಾಸಕರನ್ನು ಕರೆತನ್ನಿ, ಸಿಎಂ ಆಗಿ:100 ಶಾಸಕರನ್ನು ಕರೆತಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗುವಂತೆ ರಾಜ್ಯದ ಇಬ್ಬರು ಉಪ ಮುಖ್ಯಮಂತ್ರಿಗಳಾದ ಕೇಶವ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಅವರಿಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಫರ್ ನೀಡಿದ್ದಾರೆ. ರಾಜ್ಯದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳಿದ್ದಾರೆ. ಇಬ್ಬರು ಮುಖ್ಯಮಂತ್ರಿ ಆಗುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅದಕ್ಕಾಗಿ 100 ಶಾಸಕರನ್ನು ಕರತನ್ನಿ. ನೀವು ಬಯಸಿದಾಗ ಸಿಎಂ ಆಗಿ ಎಂದು ನಾವು ಆಫರ್ ನೀಡುತ್ತಿದ್ದೇವೆ ಎಂದು ಉತ್ತರ ಪ್ರದೇಶದ ರಾಂಪುರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಹೇಳಿದರು. ಡಿಸೆಂಬರ್ 5ರಂದು ನಡೆಯುವ ಉಪ ಚುನಾವಣೆಗೆ ಎಸ್​ಪಿ ಅಭ್ಯರ್ಥಿ ಪರವಾಗಿ ಅಖಿಲೇಶ್ ಯಾದವ್, ಅಜಂಖಾನ್ ಮತ್ತು ಬೀಮ್ ಆರ್ವಿು ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾಂಪುರದಲ್ಲಿ ಪ್ರಚಾರ ನಡೆಸಿದರು.
ಕೈ ತೊರೆದ ನಾಯಕರಿಗೆ ಬಿಜೆಪಿಯಲ್ಲಿ ಪ್ರಮುಖ ಹುದ್ದೆ:ಕಾಂಗ್ರೆಸ್​ನಿಂದ ಪಕ್ಷಾಂತರ ಮಾಡಿರುವ ನಾಯಕರಿಗೆ ಬಿಜೆಪಿ ಪ್ರಮುಖ ಹುದ್ದೆಗಳನ್ನು ನೀಡಿದೆ. ಮೂರು ತಿಂಗಳ ಹಿಂದಷ್ಟೇ ಕಾಂಗ್ರೆಸ್ ತೊರೆದಿದ್ದ ಯುವ ನಾಯಕ ಜೈವೀರ್ ಶೇರ್​ಗಿಲ್ ಅವರನ್ನು ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಸುನಿಲ್ ಜಾಖರ್​ರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ಉತ್ತರ ಪ್ರದೇಶದ ಬಿಜೆಪಿಯ ಮಾಜಿ ಅಧ್ಯಕ್ಷ ಸ್ವತಂತ್ರ ದೇವ್​ಸಿಂಗ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರಾಗಿ, ಉತ್ತರಾಖಂಡ ಮತ್ತು ಛತ್ತೀಸ್​ಗಢದ ಪಕ್ಷದ ಮಾಜಿ ಅಧ್ಯಕ್ಷರಾದ ಮದನ್ ಕೌಶಿಕ್, ವಿಷ್ಣು ದೇವ ಸಾಯಿ, ಪಂಜಾಬ್​ನ ರಾಣಾ ಗುರ್ವಿುತ್ ಸಿಂಗ್ ಸೋದಿ, ಮನೋರಂಜನ್ ಕಾಲಿಯಾ ಮತ್ತು ಅಮನ್​ಜೋರ್ ಕೌರ್ ರಾಮೋವಾಲಿಯಾ ಅವರನ್ನು ಕಾರ್ಯಕಾರಿಣಿಯ ವಿಶೇಷ ಆಹ್ವಾನಿತರಾಗಿ ನೇಮಿಸಲಾಗಿದೆ ಎಂದು ಪಕ್ಷ ತಿಳಿಸಿದೆ.
ಇಂದು ಕಾಂಗ್ರೆಸ್ ಸಭೆ:ಡಿಸೆಂಬರ್ 7ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕುವ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್​ನ ಪ್ರಮುಖ ಮುಖಂಡರು ಶನಿವಾರ ಸಂಜೆ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ಸೇರಿ ರ್ಚಚಿಸಲಿದ್ದಾರೆ. ಸೋನಿಯಾ ಗಾಂಧಿ ಅವರ 10ನೇ ಜನಪತ್ ನಿವಾಸದಲ್ಲಿನ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ, ರಾಜ್ಯಸಭೆಯಲ್ಲಿ ಪಕ್ಷದ ಮುಖಂಡ ಜೈರಾಂ ರಮೇಶ್, ಕೆ. ಸುರೇಶ್ ,ಮಾಜಿ ಸಚಿವ ಪಿ. ಚಿದಂಬರಂ, ಮನೀಶ್ ತಿವಾರಿ ಭಾಗವಹಿಸುತ್ತಿದ್ದು, ಪಕ್ಷದ ಇತ್ತೀಚಿನ ಬೆಳವಣಿಗೆ ಕುರಿತು ರ್ಚಚಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪಕ್ಷದ ರಾಷ್ಟ್ರಾಧ್ಯಕ್ಷರಾದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ರಿಪಬ್ಲಿಕ್ ಸ್ಟುಡಿಯೋದಲ್ಲಿ ‘ವಿಜಯಾನಂದ’ ಚಿತ್ರತಂಡ; ಡಿ. 9ರಂದು ಅದ್ಧೂರಿ ಬಿಡುಗಡೆ..

ಮೂರೂವರೆ ನಿಮಿಷಗಳಲ್ಲಿ ಪಾಸ್ತಾ ಆಗ್ತಿಲ್ಲ ಅಂತ ಕಂಪನಿ ವಿರುದ್ಧ ಸುಮಾರು 40 ಕೋಟಿ ರೂ. ಕೇಸ್ ಹಾಕಿದ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
