ನವದೆಹಲಿ:ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ) ನೂತನ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರಿಂದು (ಅ.26) ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಷ್ಟು ದಿನಗಳವರೆಗೆ ಹಂಗಾಮಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರ ಮಾಡಿದರು.
ಅಧಿಕಾರ ಸ್ವೀಕರಿಸುವ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ದೆಹಲಿಯ ಎಐಸಿಸಿ ಮುಖ್ಯಕಚೇರಿಯಲ್ಲಿ ಖರ್ಗೆ ಅವರು ಅಧಿಕಾರ ವಹಿಸಿಕೊಂಡರು.
ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಸೋನಿಯಾ ಗಾಂಧಿ, ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಬದಲಾವಣೆ ಜಗದ ನಿಯಮ. ಕಾಂಗ್ರೆಸ್ ಈ ಹಿಂದೆಯೂ ಸಹ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ. ಆದರೆ ಆ ಸಮಸ್ಯೆಗಳನ್ನು ನಿವಾರಿಸುತ್ತೇವೆ ಎಂಬದರ ಬಗ್ಗೆ ನನಗೆ ಖಾತ್ರಿಯಿದೆ ಎಂದರು.
ಅ. 17ರಂದು ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಿತು. ಮತಾಧಿಕಾರ ಪಡೆದಿದ್ದ ಒಟ್ಟು 9100 ಮಂದಿ ಪೈಕಿ ಶೇ. 96ರಷ್ಟು ಜನರು ಮತದಾನ ಮಾಡಿದ್ದರು. ಬ್ಯಾಲೆಟ್​ ಬಾಕ್ಸ್​ಗಳನ್ನು ಎಲ್ಲ ರಾಜ್ಯಗಳಿಂದ ದೆಹಲಿಗೆ ತರಿಸಿಕೊಂಡು ಅ.19ರಂದು ಮತಎಣಿಕೆ ಮಾಡಲಾಯಿತು.
ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆಯುವ ಮೂಲಕ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದರೆ, ಎದುರಾಳಿ ಅಭ್ಯರ್ಥಿ ಶಶಿ ತರೂರ್​ 1072 ಮತಗಳನ್ನು ಮಾತ್ರ ಪಡೆದರು. 24 ವರ್ಷಗಳ ಬಳಿಕ ಕಾಂಗ್ರೆಸ್​ ಮೊದಲ ಬಾರಿಗೆ ಗಾಂಧಿಯೇತರ ಮುಖ್ಯಸ್ಥರನ್ನು ಪಡೆದಿದೆ.
ಈ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20ರ ನಡುವೆ ಹೊಸ ಪಕ್ಷದ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಕಾಂಗ್ರೆಸ್ ಕಳೆದ ವರ್ಷ ಅಕ್ಟೋಬರ್‌ನಲ್ಲಿಯೇ ಘೋಷಿಸಿತ್ತು. 2019 ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಎರಡನೇ ಸೋಲಿನ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ರಾಹುಲ್​ ರಾಜೀನಾಮೆ ಬಳಿಕ ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ, ಒಂದು ಗುಂಪಿನ ನಾಯಕರು ಬಹಿರಂಗವಾಗಿ ಬಂಡಾಯ ಎದ್ದಾಗ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಸಿಡಬ್ಲ್ಯೂಸಿ ಅವರನ್ನು ಮುಂದುವರಿಸಲು ಒತ್ತಾಯಿಸಿತ್ತು. ಇಲ್ಲಿಯವರೆಗೆ ಅವರು ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.(ಏಜೆನ್ಸೀಸ್​)
ಕಾಂಗ್ರೆಸ್​ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಬೆಂಕಿಯಲ್ಲಿ ಅರಳಿದ ಮಲ್ಲಿಕಾರ್ಜುನ ಖರ್ಗೆ

ಬಂಡೇ ಮಠದ ಬಸವಲಿಂಗ ಶ್ರೀ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಮಹಿಳೆ ಜತೆಗಿನ ವಿಡಿಯೋ ಕಾಲ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 11 =
Remember me
