ತಿರುವನಂತಪುರಂ:2024ರ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ವಯನಾಡು ಸಂಸದ ರಾಹುಲ್​ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್​ ಕಾರ್ಯಕಾರಿ ಸಮಿತಿ (CWC) ಸದಸ್ಯ ಶಶಿ ತರೂರ್​ ಹೇಳಿದ್ದಾರೆ.
ಈ ಕುರಿತು ತಿರುವನಂತಪುರದಲ್ಲಿ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಅ್ಚ್ರಿಯ ಫಲಿತಾಂಶ ಬರಬಹುದು. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವನ್ನು ಮಣಿಸಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ.
ಇದನ್ನೂ ಓದಿ:ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ; ಇಂದು ಸುಪ್ರೀಂ ಕೋರ್ಟ್ ತೀರ್ಪು
ಒಮ್ಮೆ ಫಲಿತಾಂಶ ಬಂದರೆ ಒಂದು ನಿರ್ದಿಷ್ಟ ಪಕ್ಷದ ಪರವಾಗಿ ಬರುವುದಿಲ್ಲ. ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ನಾವು ಒಮ್ಮತದಿಂದ ಒಬ್ಬ ನಾಯಕನನ್ನು ಆಯ್ಕೆ ಮಾಡಬೇಕಾಗಿದೆ. ಒಂದು ವೇಳೆ ಕಾಂಗ್ರೆಸ್​ ಪಕ್ಷಕ್ಕೆ ಪ್ರಧಾನಿ ಆಯ್ಕೆ ಮಾಡುವ ಅವಕಾಶ ಒದಗಿ ಬಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್​ ಗಾಂಧಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.
ಪ್ರಧಾನಿಯಾದವರು ಎಲ್ಲರನ್ನೂ ಸಮಾನವಾಗಿ ಕಾಣುವುದು ಮುಖ್ಯ ಮತ್ತು ಆ ಸ್ಥಾನಕ್ಕೆ ಆಯ್ಕೆಯಾಗುವ ಅಭ್ಯರ್ಥಿಯು ತಮ್ಮ ಜವಾಬ್ದಾರಿಯಿಂದ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿರುವನಂತಪುರ ಕ್ಷೇತ್ರದ ಕಾಂಗ್ರೆಸ್​ ಸಂಸದ ಶಶಿ ತರೂರ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 4 =
Remember me
