ಭೋಪಾಲ್​:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ತಮ್ಮ ಪಕ್ಷಕ್ಕೆ ಒಂದು ಅವಕಾಶವನ್ನು ನೀಡಿ ಎಂದು ದೆಹಲಿ ಮುಖ್ಯಮಂತ್ರಿ, ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಜನತೆಗೆ ಮನವಿ ಮಾಡಿದ್ದಾರೆ.
ಮದ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್​ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ರನ್ನು ಮಾಮ ಎಂದು ಸಂಬೋಧಿಸಿದ್ದಾರೆ.
ನಾನು ಇಲ್ಲಿಗೆ ಬರುವ ಮುನ್ನ ಸೋದರಳಿಯ ಹಾಗೂ ಸೊಸೆಯಂದಿರಿಗೆ ಒಬ್ಬ ಮಾಮ ಮೋಸ ಮಾಡಿದ್ದಾನೆಂದು ತಿಳಿದು ಬಂದಿತ್ತು. ಮುಂಬರುವ ಚುನಾವಣೆಯಲ್ಲಿ ನೀವು ಅವನನ್ನು ನಂಬಬೇಡಿ. ನಿಮ್ಮ ಚಿಕ್ಕಪ್ಪ(ಅರವಿಂದ್​ ಕೇಜ್ರಿವಾಲ್​) ಬಂದಿದ್ದು, ನನ್ನ ಮೇಲೆ ನಂಬಿಕೆ ಇಡಿ ಎಂದಿದ್ದಾರೆ.
ಇದನ್ನೂ ಓದಿ:ಮಗನ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ತಂದೆಯ ಕೊಲೆ
ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಕೇಜ್ರಿವಾಲ್​ ಮಹತ್ವದ ಘೋಷಣೆಗಳನ್ನು ಮಾಡಿದ್ದು, ಎಎಪಿ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಮನೆಗೆ 300 ಯೂನಿಟ್​ ಉಚಿತ ವಿದ್ಯುತ್​, ಮಹಿಳೆಯರು ಹಾಗೂ ನಿರುದ್ಯೋಗಿ ಯುವಕರಿಗೆ ಮಾಸಿಕ ಮೂರು ಸಾವಿರ ರೂಪಾಯಿ ಭತ್ಯೆ, ಉಚಿತ ಚಿಕಿತ್ಸೆ ಸೇರಿದಂತೆ ದೆಹಲಿ ಹಾಗೂ ಪಂಜಾಬ್​ನಲ್ಲಿ ಜಾರಿಯಲ್ಲಿರುವ 10 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ.
ಚುನಾವಣೆ ಸಮಯದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡುವ ನಾಯಕರು ಅದರಲ್ಲೇನಿದೆ ಎಂದು ಓದುವುದಿಲ್ಲ. ಆದರೆ, ನಾವು ಕೊಟ್ಟ ಮಾತನ್ನು ಸಂಪೂರ್ಣವಾಗಿ ಈಡೇರಿಸುತ್ತೇವೆ ನಮ್ಮ ಮೇಲೆ ವಿಶ್ವಾವನ್ನಿಟ್ಟು ಮತ ಹಾಕಿ. ನೀವು ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್​ಗೆ ಆಶೀರ್ವಾದ ಮಾಡಿದ್ದೀರಾ. ದೆಹಲಿ ಹಾಗೂ ಪಂಜಾಬ್​ನಲ್ಲಿ ನಮ್ಮ ಆಡಳಿತವನ್ನು ನೋಡಿ ನಮಗೂ ಒಂದು ಅವಕಾಶ ಕೊಡಿ ಎಂದು ಅರವಿಂದ್​ ಕೇಜ್ರಿವಾಲ್ ವಿನಂತಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
