ದೇಶದಲ್ಲಿ ಕರೊನಾ ವೈರಸ್​ ಪ್ರಸರಣ ಮಿತಿಮೀರುತ್ತಿದೆ. ಅನೇಕ ಕಡೆಗಳಲ್ಲಿ ಸಮುದಾಯ ಪ್ರಸರಣವಾಗುತ್ತಿದ್ದರೂ ಅದನ್ನು ಜನಪ್ರತಿನಿಧಿಗಳು, ಸರ್ಕಾರಗಳು ಅಧಿಕೃತವಾಗಿ ಹೇಳುತ್ತಿಲ್ಲ.
ಹೀಗಿರುವಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ರಾಜ್ಯದಲ್ಲಿ ಕರೊನಾ ಸೋಂಕು ಸಮುದಾಯ ಪ್ರಸರಣ ಹಂತಕ್ಕೆ ತಲುಪಿದೆ ಎಂದು ಒಪ್ಪಿಕೊಂಡಿದ್ದಾರೆ.ಇದನ್ನೂ ಓದಿ:ಕೆ.ಕಲ್ಯಾಣ್​ರ ಮನೆ ಹಾಳು ಮಾಡಿದ ಮನೆಕೆಲಸದವಳು; ಗಂಗಾ, ಶಿವಾನಂದ್ ಹಿಸ್ಟರಿಯೇ ಭಯಾನಕ
ಹತ್ರಾಸ್​ ಗ್ಯಾಂಗ್​ ರೇಪ್​ ಖಂಡಿಸಿ ಕೋಲ್ಕತ್ತದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ಮಾತನಾಡಿದ ದೀದಿ, ನಾವು ಕರೊನಾ ಸಾಂಕ್ರಾಮಿಕದ ಮಧ್ಯದಲ್ಲಿದ್ದೇವೆ. ನಮ್ಮ ಮೂವರು ಶಾಸಕರನ್ನು ಈಗಾಗಲೇ ಕಳೆದುಕೊಂಡಿದ್ದೇವೆ. ದೇಶಾದ್ಯಂತ ನಿಜಕ್ಕೂ ಕರೊನಾದಿಂದ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಅದಾಗಲೇ ಕಮ್ಯೂನಿಟಿ ಸ್ಪ್ರೆಡ್​ (ಸಮುದಾಯ ಪ್ರಸರಣ) ಶುರುವಾಗಿದೆ ಎಂದು ಹೇಳಿದ್ದಾರೆ.
ಕರೊನಾ ಕಾರಣದಿಂದ ಕಳೆದ ಕೆಲವು ದಿನಗಳಿಂದಲೂ ನಾವು ಯಾವುದೇ ರ್ಯಾಲಿಯನ್ನು ನಡೆಸುತ್ತಿಲ್ಲ. ಆದರೆ ಬಿಜೆಪಿ ಅದನ್ನು ಮಾಡುತ್ತಿದೆ. ಅಷ್ಟೇ ಅಲ್ಲ ದ್ವೇಷ ಮತ್ತು ಕರೊನಾ ಸೋಂಕನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.  ಇನ್ನು ಕೋಲ್ಕತ್ತದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲೂ ಸಹ ತೃಣಮೂಲ ಕಾಂಗ್ರೆಸ್​ನ ಹಲವು ಕಾರ್ಯಕರ್ತರು ಮಾಸ್ಕ್​ ಇಲ್ಲದೆ ಪಾಲ್ಗೊಂಡಿದ್ದರು.(ಏಜೆನ್ಸೀಸ್​)
ಮಲ್ಲೇಶ್ವರಂ ಮುಖ್ಯರಸ್ತೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಯುವಕನ ದಾರುಣ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + one =
Remember me
