ಕೋಲ್ಕತ:ಚುನಾವಣಾ ಪ್ರಚಾರ ಮಾಡುವ ವೇಳೆ ಕಾಲಿಗೆ ಪೆಟ್ಟಾಗಿ ಆಸ್ಪತ್ರೆ ಸೇರಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸತತ 48 ಗಂಟೆಗಳ ಚಿಕಿತ್ಸೆಯ ನಂತರ ಇದೀಗ ದೀದಿ ಅವರ ನಿವಾಸಕ್ಕೆ ವಾಪಾಸಾಗಿದ್ದಾರೆ.
ಮಮತಾ ಅವರು ಬುಧವಾರದಂದು ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡುವಾಗ ಗಾಯಾಳುವಾದರು. ನಾಲ್ಕೈದು ಜನರು ತಮ್ಮ ಮೇಲೆ ದಾಳಿ ಮಾಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ ಘಟನೆಯ ಸ್ಥಳದಲ್ಲಿದ್ದ ಸಾರ್ವಜನಿಕರು ಅದನ್ನು ಆಕಸ್ಮಿಕ ಘಟನೆ ಎಂದು ವಿವರಿಸಿದ್ದಾರೆ. ಕಾರಿನ ಬಾಗಿಲ ಹೊಡೆತದಿಂದಲೇ ಅವರ ಕಾಲು ಮುರಿದಿದ್ದಾಗಿ ಜನರು ತಿಳಿಸಿದ್ದಾರೆ.
ಬುಧವಾರ ಸಂಜೆಯೇ ಮಮತಾ ಅವರನ್ನು ಕೋಲ್ಕತದ ಎಸ್​ಎಸ್​ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿದ್ದುಕೊಂಡೇ ದೀದಿ ತಮ್ಮ ಕಾರ್ಯಕರ್ತರಿಗೆ ಶಾಂತವಾಗಿರಲು ವಿಡಿಯೋ ಸಂದೇಶ ಹರಿಬಿಟ್ಟಿದ್ದರು. ಮಮತಾ ಅವರ ಆರೋಗ್ಯ ಸ್ಥಿರವಾಗಿದೆ, 48 ತಾಸುಗಳ ಕಾಲ ವೈದ್ಯಕೀಯ ನಿಗಾದಲ್ಲಿ ಇಟ್ಟುಕೊಳ್ಳಲಿದ್ದೇವೆ ಎಂದು ವೈದ್ಯರು ತಿಳಿಸಿದ್ದರು. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಇನ್ನು ಒಂದು ವಾರದಲ್ಲಿ ಅವರ ಆರೋಗ್ಯ ಇನ್ನಷ್ಟು ಸುಧಾರಿಸುವುದಾಗಿ ವೈದ್ಯರು ತಿಳಿಸಿದ್ದಾರೆ. ವೀಲ್​ ಚೇರ್​ನಲ್ಲಿ ಕುಳಿತೇ ಪ್ರಚಾರ ಮಾಡುವ ಪಣವನ್ನು ದೀದಿ ತೊಟ್ಟಿದ್ದಾರೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

5ನೇ ವಯಸ್ಸಿಗೇ ಲೈಂಗಿಕ ಕಿರುಕುಳ, 9ಕ್ಕೆ ರೇಪ್​ಗೆ ಒಳಗಾಗಿದ್ದರಂತೆ ಸಲ್ಮಾನ್​ ಖಾನ್​ರ ಎಕ್ಸ್​ ಗರ್ಲ್​ಫ್ರೆಂಡ್​!

ಬಿ.ಎಸ್ಸಿ ನರ್ಸಿಂಗ್ ಪರೀಕ್ಷೆ ಮುಗಿದ 24 ಗಂಟೆಗಳಲ್ಲೇ ಫಲಿತಾಂಶ; ಪಾಸಾದವರಿಗಿಂತ ಫೇಲಾದವರೇ ಹೆಚ್ಚು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 10 =
Remember me
