ಕೋಲ್ಕತ:ಪಶ್ಚಿಮ ಬಂಗಾಳದ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ಆದರೆ ಬಸವಳಿಯದ ಅವರು ಚುನಾವಣಾ ಪ್ರಚಾರಕ್ಕೆ ವೀಲ್​ಚೇರ್​ನಲ್ಲೇ ಬರುವುದಾಗಿ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ಕೋಲ್ಕತದ ಎಸ್​ಎಸ್​ಕೆಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಮತಾ ಬ್ಯಾನರ್ಜಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ತಾಳ್ಮೆ ಕಳೆದುಕೊಂಡು, ಸಾರ್ವಜನಿಕರಿಗೆ ಹಾನಿಯಾಗುವಂತಹ ಕೆಲಸ ಮಾಡಬಾರದು. ಶಾಂತವಾಗಿರಿ. ನಾನು ಇನ್ನು ಎರಡು ಮೂರು ದಿನಗಳಲ್ಲಿ ಪ್ರಚಾರಕ್ಕೆ ವಾಪಾಸಾಗುತ್ತೇನೆ. ಕೆಲ ದಿನಗಳ ಕಾಲ ವೀಲ್​ ಚೇರ್​ ಮೇಲೆ ಕುಳಿತೇ ಪ್ರಚಾರ ಮಾಡಬೇಕಾಗಬಹುದು. ಆದರೆ ನಾನು ಯಾವುದೇ ಸಭೆಗಳನ್ನು ಮಿಸ್​ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
ಮಮತಾ ಅವರ ಎಡ ಪಾದ, ಕಾಲಿನ ಮೂಳೆ ಮುರಿದಿರುವುದಾಗಿ ಹೇಳಲಾಗಿದೆ. ಕತ್ತಿನ ಭಾಗದಲ್ಲೂ ಸ್ವಲ್ಪ ಗಾಯವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಮಾಡೆಲಿಂಗ್​ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಯುವತಿಯ ಬಾಯ್​ಫ್ರೆಂಡ್​ ಸೇರಿ ಮೂವರು ಪೊಲೀಸರ ವಶಕ್ಕೆ

ರಿಯಾಲಿಟಿ ಶೋ ಸ್ಪರ್ಧಿಯನ್ನು ಡೇಟ್​ಗೆ ಕರೆದ ಜಾನ್ವಿ ಕಪೂರ್​! ಅಂತದ್ದೇನಾಯ್ತು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
