ಕೊಲ್ಕತ್ತ:ಹವಾಮಾನ ವೈಪರೀತ್ಯದಿಂದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ ಸಿಲುಗುರಿ ಬಳಿ ಇರುವ ಸೆವೋಕ್​ ವಾಯುನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ಹೆಲಿಕಾಪ್ಟರ್​ ತುರ್ತು ಭೂ ಸ್ಪರ್ಶ ಮಾಡಿದ ಪರಿಣಾಮ ಮಮತಾ ಬ್ಯಾನರ್ಜಿ ಸೊಂಟ, ಕಾಲಿಗೆ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ SSKM ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಮಮತ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಟಿಎಂಸಿ-ಬಿಜೆಪಿ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದೆ.
#WATCH| West Bengal CM Mamata Banerjee arrived at SSKM Hospital in Kolkata this evening.Earlier today, her helicopter made an emergency landing at Sevoke Airbase due to low visibility. She was going to Bagdogra after addressing a public gathering at Krinti, Jalpaiguri.pic.twitter.com/HCt7vzsTM4
ಇದನ್ನೂ ಓದಿ:VIDEO| ನೀರಿನೊಳಗೆ ಕೈಹಾಕಿ ಶಾರ್ಕ್​ಗೆ ಆಹಾರವಾದ!
ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿ ಒಬ್ಬರು ಬಾರಿ ಮಳೆ ಹಾಗೂ ಜೋರಾಗಿ ಗಾಳಿ ಬೀಸುತ್ತಿದ್ದ ಕಾರಣ ಹೆಲಿಕಾಪ್ಟರ್​ಅನನ್ಉ ಪೈಲಟ್​ ತುರ್ತು ಭೂ ಸ್ಪರ್ಶ ಮಾಡಿದೆ. ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಮುಖ್ಯಮಂತ್ರಿಗಳ ಕಾಲು ಹಾಗೂ ಸೊಂಟದ ಭಾಗಕ್ಕೆ ಗಾಯವಾಗಿದ್ದು, ಅವರನ್ನು SSKM ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆದ ನಂತರ ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ತೆರಳಿದ್ದಾರೆ ಎಂದು ತಿಳಿಸಿದ್ಧಾರೆ
ಜುಲೈ 8ರಂದು ನಡೆಯುವ ಪಂಚಾಯತ್​ ಚುನಾವಣೆ ಸಂಬಂಧ ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಜಿಲ್ಲೆಗಳಲ್ಲಿ ಸಿಎಂ ಎರಡು ದಿನಗಳ ಪ್ರವಾಸವನ್ನು ಕೈಗೊಂಡಿದ್ದರು. ಮಮತಾ ಬ್ಯಾನರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸುಕಾಂತ್​ ಪ್ರತಿ ಚುನಾವಣೆ ಸಂದರ್ಭದಲ್ಲಿ ಸಿಎಂಗೆ ಯಾಕೆ ಗಾಯ ಮಾಡಿಕೊಳ್ಳುತ್ತಾರೆ ಎಂದು ಪ್ರಶ್ನಿಸುವ ಮೂಲಕ ಟಿಎಂಸಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve + 5 =
Remember me
