ಕೋಲ್ಕತ:ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ನಾಲ್ಕು ತಿಂಗಳು ಬಾಕಿಯಿವೆ. ಈಗಾಗಲೇ ಎಲ್ಲ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾರಂಭಿಸಿವೆ. ಈ ಮಧ್ಯೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸುವೇಂದು ಅಧಿಕಾರಿ ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿದ್ದಾರೆ. ಇದೀಗ ಸುವೇಂದು ಅವರ ಕ್ಷೇತ್ರದಿಂದ ಸುವೇಂದುಗೆ ವಿರುದ್ಧವಾಗಿ ನಾನೇ ಕಣಕ್ಕಿಳಿಯುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇದನ್ನೂ ಓದಿ:ಹಿಂದೂ ದೇವತೆಗಳಿಗೆ ಅವಮಾನ; ತಾಂಡವ್ ವೆಬ್​ ಸಿರೀಸ್ ನಿರ್ದೇಶಕರ ವಿರುದ್ಧ ಕೇಸ್; ಸೈಫ್ ಮನೆಗೆ ಭದ್ರತೆ!
ಸುವೇಂದು ಅಧಿಕಾರಿ ನಂದಿಗ್ರಾಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಅವರು ಅದೇ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆಗೆ ನಿಲ್ಲುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸಲಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇದನ್ನೂ ಓದಿ:ಮಗಳನ್ನು ಕೊಲೆ ಮಾಡಲು ತಾಯಿಯೇ ನೀಡಿದಳು 50 ಸಾವಿರ ರೂ. ಸುಪಾರಿ!
ನಂದಿಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಅವರು, “ಬಿಜೆಪಿ ರಾಜ್ಯದಲ್ಲಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದಾಗಿ ಹೇಳಿಕೊಂಡಿದೆ. ಆದರೆ ಅದು ಕೇವಲ 51 ಸ್ಥಾನ ಗೆಲ್ಲಲಿದೆ. ನಾವು 211 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದೇವೆ” ಎಂದು ಹೇಳಿದ್ದಾರೆ. (ಏಜೆನ್ಸೀಸ್​)
ಗರ್ಭಿಣಿಯಾದಾಗ ಎಲ್ಲವೂ ಸರಿಯಾಗುತ್ತದೆ- ಗಾತ್ರದ ಬಗ್ಗೆ ಮುಜುಗರ ಬೇಡ…

ಮಗಳಿಗೆಂದು ಧಾರ್ಮಿಕ ಗುರುವನ್ನು ಮನೆಗೆ ಕರೆತಂದ ಅಮ್ಮ; ಕೆಲವೇ ತಿಂಗಳಲ್ಲಿ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
