ಕೋಲ್ಕತ:ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣುತ್ತಿದ್ದು, ಸಾವಿರಾರು ಮಂದಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುಟುಂಬಕ್ಕೂ ಕರೊನಾ ಅಲೆ ತಟ್ಟಿದ್ದು, ಅವರ ತಮ್ಮ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಮಮತಾ ಬ್ಯಾನರ್ಜಿ ಅವರ ತಮ್ಮ ಆಶಿಮ್​ ಬ್ಯಾನರ್ಜಿ (60) ಅವರಿಗೆ ಕರೊನಾ ಸೋಂಕು ದೃಢವಾಗಿದ್ದು, ಕೆಲ ದಿನಗಳಿಂದ ಅವರಿಗೆ ಕೋಲ್ಕತದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರು ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕರೊನಾ ನಿಯಮಾವಳಿಗಳ ಅನುಸಾರ ಅಂತ್ಯಕ್ರಿಯೆಯನ್ನು ಇಂದು ಮಾಡಲಾಗುವುದು ಎಂದು ತಿಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಳವಾಗುತ್ತಿದೆ. ಶುಕ್ರವಾರ ಒಂದೇ ದಿನದಲ್ಲಿ 20,800ಕ್ಕೂ ಅಧಿಕ ಪ್ರಕರಣಗಳು ದೃಢವಾಗಿವೆ. ಅದೇ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 15 ದಿನಗಳ ಕಾಲ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. (ಏಜೆನ್ಸೀಸ್)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + three =
Remember me
