ಕೋಲ್ಕತ್ತಾ:ಪಶ್ಚಿಮ ಬಂಗಾಳದಲ್ಲಿ ಶಾಂತಿ ಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ತೃಣಮೂಲ ಛತ್ರ ಪರಿಷತ್ತಿನ ಸಂಸ್ಥಾಪನಾ ದಿನದ ಅಂಗವಾಗಿ ಕೋಲ್ಕತ್ತಾದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸಬೇಕು. ಮುಂದಿನ ವಾರ ವಿಧಾನಸಭೆ ಆಯೋಜಿಸಿ 10 ದಿನಗಳಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:‘ಬಾಲಿವುಡ್​ ಹೋಪ್​ಲೆಸ್​ ಪ್ಲೇಸ್​’: ಕಂಗನಾ ಹೀಗೆನ್ನಲು ಕಾರಣ ಇದೇ ನೋಡಿ..
ಬಳಿಕ ವಿಧೇಯಕವನ್ನು ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರು ಒಪ್ಪಿಗೆ ನೀಡದಿದ್ದರೆ ರಾಜಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಈ ಬಾರಿ ರಾಜ್ಯಪಾಲರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಮತಾ ಹೇಳಿದರು.
ಟಿಎಂಸಿ ಕಾರ್ಯಕ್ರಮವನ್ನು ಡಾ.ಆರ್.ಜಿ.ಕರ್ ಅವರಿಗೆ ಅರ್ಪಿಸುತ್ತಿದ್ದೇವೆ. ನಮಗೆ ನ್ಯಾಯ ಬೇಕು. ಆದರೆ ಬಿಜೆಪಿ ಇಂದು ಬಂದ್‌ಗೆ ಕರೆ ನೀಡಿದೆ. ಅವರಿಗೆ ನ್ಯಾಯ ಬೇಕಾಗಿಲ್ಲ. ಅವರು ಬಂಗಾಳಕ್ಕೆ ಅಪಖ್ಯಾತಿ ತರಲು ಪ್ರಯತ್ನಿಸುತ್ತಿದ್ದಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಅಥವಾ ಕನಿಷ್ಠ ಮಣಿಪುರದ ಮುಖ್ಯಮಂತ್ರಿಗಳ ರಾಜೀನಾಮೆಗೆ ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಪರಿಸ್ಥಿತಿಯನ್ನು ಸಮರ್ಥವಾಗಿ ಪೊಲೀಸರು ನಿಭಾಯಿಸಿದ್ದಾರೆ. ಎಂದು ತಿಳಿಸಿದರು.ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ತಾನು ಪದೇ ಪದೇ ಹೇಳುತ್ತಿದ್ದೇನೆ ಎಂದು ಅವರು ಹೇಳಿದರು.
ಅನಿಶ್ಚಿತತೆಯಲ್ಲಿ ಷೇರುಪೇಟೆ ಸೂಚ್ಯಂಕ: ಸೆನ್ಸೆಕ್ಸ್ ಸ್ಥಿರ..ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ನಿಫ್ಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − four =
Remember me
