ಕೋಲ್ಕತ್ತ:ಹತ್ರಾಸ್​ ಸಾಮೂಹಿಕ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್​ ಮೂಲಕ ಮೃತ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಿದ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ದಲಿತರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ಎಂಬುದು ಒಂದು ತಮಾಷೆಯ ವಿಚಾರವಾಗಿದೆ. ಬಿಜೆಪಿ ಸರ್ಕಾರದಿಂದಾಗಿ ಪ್ರತಿಯೊಬ್ಬ ದಲಿತನ ಜೀವನವೂ ಅಪಾಯದಲ್ಲಿಯೇ ಇರುವಂತಾಗಿದೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ:ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕ್: ಇಬ್ಬರು ಭಾರತೀಯ ಯೋಧರು ಹುತಾತ್ಮ
ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಯೋಗಿ ಆದಿತ್ಯನಾಥ್​ ಸರ್ಕಾರದಿಂದ ಸಾಧ್ಯವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ, ನೀವು ನಮ್ಮ ದೇಶದ ಹೆಣ್ಣುಮಕ್ಕಳ ರಕ್ಷಣೆಯಲ್ಲಿ ವಿಫಲರಾಗಿದ್ದೀರಿ. ನಮಗೆ ಭವಿಷ್ಯದ ಬಗ್ಗೆ ತುಂಬ ಚಿಂತೆಯಾಗುತ್ತಿದೆ. ನಿಮ್ಮ ಅಬ್ಬರದಿಂದ ಇನ್ನುಮುಂದೆ ಈ ದೇಶದ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವೇ ಇಲ್ಲ ಎಂದು ದೀದಿ ಹೇಳಿದ್ದಾರೆ.
ಹತ್ರಾಸ್​​ನಲ್ಲಿ ದಲಿತ ಯುವತಿಯ ಮೇಲೆ ನಡೆದ ಕ್ರೂರ, ನಾಚಿಕೆಗೇಡಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಲು ಪದಗಳೇ ಇಲ್ಲ. ಅದರಲ್ಲೂ ಕುಟುಂಬದವರನ್ನು ಹೊರಗಿಟ್ಟು, ಬಲವಂತವಾಗಿ ಅಂತ್ಯಕ್ರಿಯೆ ಮಾಡಿದ್ದು ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.(ಏಜೆನ್ಸೀಸ್​)
ನನ್ನನ್ನು ತಳ್ಳಿದರು, ನೆಲಕ್ಕೆ ಬೀಳಿಸಿದರು- ಪೊಲೀಸರ ವಿರುದ್ಧ ರಾಹುಲ್​ ಗಾಂಧಿ ಗುಡುಗು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + three =
Remember me
