ಕೋಲ್ಕತ: ಕೋವಿಡ್ -19 ಬಿಕ್ಕಟ್ಟಿನ ಈ ಅವಧಿಯಲ್ಲಿ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವ ಪ್ರಯತ್ನದಲ್ಲಿ “ಪೌರತ್ವ”, “ಫೆಡರಲಿಸಂ” ಮತ್ತು “ವಿಭಜನೆ” ಮುಂತಾದ ಅಗತ್ಯ ವಿಷಯಗಳನ್ನು ಕೈಬಿಟ್ಟಿರುವ ಸಿಬಿಎಸ್‌ಇ ನಿರ್ಧಾರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಯಾವುದೇ ಕಾರಣಕ್ಕೂ ಪ್ರಮುಖ ಪಾಠಗಳನ್ನು ಮೊಟಕುಗೊಳಿಸದಂತೆ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‌ಆರ್‌ಡಿ) ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಪತಿ ಮೇಲೆ ಹಲ್ಲೆ ನಡೆಸಿದ ಪೊಲೀಸ್​​ಗೆ ಮಹಿಳೆ ಕಪಾಳಮೋಕ್ಷ
“ಈ ಬಿಕ್ಕಟ್ಟಿನ ಸಮಯದಲ್ಲಿ ಸಿಬಿಎಸ್ಇ ಪಠ್ಯಕ್ರಮವನ್ನು ಕಡಿಮೆ ಮಾಡುವ ನೆಪದಲ್ಲಿ ಕೇಂದ್ರ ಸರ್ಕಾರ ಪೌರತ್ವ, ಫೆಡರಲಿಸಂ, ಜಾತ್ಯತೀತತೆ ಮತ್ತು ವಿಭಜನೆಯಂತಹ ವಿಷಯಗಳನ್ನು ಕೈಬಿಟ್ಟಿರುವುದು ಅಘಾತಕ್ಕೀಡುಮಾಡಿದೆ. ನಾವು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಪ್ರಮುಖ ಪಾಠಗಳನ್ನು ಮೊಟಕುಗೊಳಿಸದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಟ್ವೀಟರ್ ನಲ್ಲಿ ಹೇಳಿದ್ದಾರೆ.ಕೋವಿಡ್​​1- ನಿಂದಾದ ಶೈಕ್ಷಣಿಕ ಹಾನಿ ಸರಿದೂಗಿಸಲು ಸಿಬಿಎಸ್ಇ 2020-21ರ 9 ರಿಂದ 12 ನೇ ತರಗತಿಗಳ ಪಠ್ಯಕ್ರಮವನ್ನು ಶೇಕಡಾ 30 ರಷ್ಟು ಕಡಿಮೆಗೊಳಿಸಿದೆ. ಈ ತರಗತಿಗಳಿಗೆ ಹೊಸ ಪಠ್ಯಕ್ರಮವನ್ನು ಅದು ಬುಧವಾರ ಪ್ರಕಟಿಸಿದೆ.
ಸಿಬಿಎಸ್​ಇ ಕೈಬಿಟ್ಟಿರುವ ಪಠ್ಯಗಳು ಇವೇ ನೋಡಿ, ಅದಕ್ಕೆ ವ್ಯಕ್ತವಾಗುತ್ತಿದೆ ಭಾರಿ ಟೀಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + nine =
Remember me
