ನವದೆಹಲಿ:ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.
ಆರೋಪಿತ ವ್ಯಕ್ತಿಯ ಹೆಸರನ್ನು ಪೊಲೀಸರು ಈವರೆಗೆ ಬಹಿರಂಗಪಡಿಸಿಲ್ಲ. ಆರೋಪಿಯನ್ನು ಹೈದರಾಬಾದಿನಲ್ಲಿ ಬಂಧಿಸಿರುವ ಪೊಲೀಸರು ದೆಹಲಿಗೆ ಕರೆತರುತ್ತಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಬಾಕ್ಸ್​ಆಫೀಸ್​ ಸುಲ್ತಾನನಾದ ಕಾಟೇರ; 200 ಕೋಟಿ ಕ್ಲಬ್​ಗೆ ಭರ್ಜರಿ ಎಂಟ್ರಿ ಕೊಟ್ಟ ನಟ ದರ್ಶನ್
ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ನಟಿ ಸೇರಿದಂತೆ ಅನೇಕರು ಅಸಮಾಧಾನವನ್ನು ಹೊರಹಾಕಿದ್ದರು. ವಿದೇಶದಲ್ಲಿ ನೆಲೆಸಿರುವ ಭಾರತ ಮೂಲದ ಝಾರಾ ಪಟೇಲ್ ಲಿಫ್ಟ್‌ಗೆ ಪ್ರವೇಶ ಮಾಡುತ್ತಿರುವ ವಿಡಿಯೋಗೆ ನಟಿ ರಶ್ಮಿಕಾ ಮಂದಣ್ಣ ಅವರ ಮುಖ ಜೋಡಿಸಿರುವ ವಿಡಿಯೋ ಒಂದನ್ನು ಹರಿಬಿಡಲಾಗಿತ್ತು.
ಡೀಪ್‌ಫೇಕ್ ವಿಡಿಯೊಗಳ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆತಂಕ ವ್ಯಕ್ತಪಡಿಸಿದ್ದರು. ಇಂತಹ ಕೃತ್ಯಗಳನ್ನು ತಡೆಯಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಈ ಘಟನೆ ಬಳಿಕ ನಟಿ ಕತ್ರಿನಾ ಕೈಫ್‌, ಸಾರಾ ತೆಂಡಲ್ಕೂರ್‌ ಸೇರಿದಂತೆ ಹಲವು ಸೆಲೆಬ್ರಿಟಿಗಳ  ಡೀಪ್‌ಫೇಕ್ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − one =
Remember me
