ಭೋಪಾಲ್​:ಪತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಈ ದುಷ್ಕೃತ್ಯಕ್ಕೆ ಕಾರಣವೇನು ಎನ್ನುವುದರ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ದೇವಸ್ಥಾನಕ್ಕೆ ಕದಿಯಲು ಹೋದವ ಅಲ್ಲೇ ಮಲಗಿದ! ಪೊಲೀಸರು ಬಂದು ಎಬ್ಬಿಸಿದರೆ, ‘ಚಳಿ, ಮಲಗಲು ಬಿಡಿ’ ಎಂದ!
ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮಜ್ಗವಾನ್​ ಪಟ್ಟಣದಲ್ಲಿ ಇಂತಹ ಘಟನೆ ನಡೆದಿದೆ. 37 ವರ್ಷದ ವ್ಯಕ್ತಿ ತನ್ನ 32 ವರ್ಷದ ಹೆಂಡತಿ ಮತ್ತು ಒಂದು ವರ್ಷದ ಹಾಗೂ ಐದು ವರ್ಷದ ಇಬ್ಬರು ಮಕ್ಕಳ ಗಂಟಲು ಕತ್ತರಿಸಿ ಕೊಲೆ ಮಾಡಿದ್ದಾನೆ. ನಂತರ ಮನೆಯ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮವಾರ ಮಧ್ಯರಾತ್ರಿ ಈ ಕೆಲಸ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 11.30 ಆದರೂ ಮನೆ ಬಾಗಿಲು ತೆರೆಯದಿದ್ದದ್ದನ್ನು ಕಂಡು ಗ್ರಾಮಸ್ಥರು ಕಿಟಕಿಯಿಂದ ಇಣುಕಿ ನೋಡಿದ್ದಾರೆ. ಆಗ ಮನೆಯ ಯಜಮಾನ ಫ್ಯಾನಿನಲ್ಲಿ ನೇತಾಡುತ್ತಿರುವುದು ಕಂಡಿದೆ. ತಕ್ಷಣ ಪೊಲೀಸರಿಗೆ ವಿಚಾರ ಮುಟ್ಟಿಸಲಾಗಿದೆ.
ಇದನ್ನೂ ಓದಿ:ಜೀವಂತ ಗೂಬೆ ತಲೆ ಕತ್ತರಿಸಿದ ಆರೇ ತಿಂಗಳಲ್ಲಿ ಯುವತಿಗೆ ಬಂತು ಘೋರ ಸಾವು: ಜೀವಿಯ ಶಾಪ ತಟ್ಟಿತಾ?!
ಪೊಲೀಸರು ಬಂದು ಮನೆ ಬಾಗಿಲು ಒಡೆದು ನೋಡಿದಾಗ, ಮಹಿಳೆ ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ನಾಲ್ಕೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಬಗ್ಗೆ ಎಲ್ಲ ಕೋನಗಳಿಂದ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಸ್ನೇಕ್​ ಡ್ಯಾನಿ ದುರಂತ ಸಾವು: 75 ಬಾರಿ ಬಚಾವ್​ ಆದ್ರೂ ಬೆಂಬಿಡದ ಮೃತ್ಯು!

https://www.vijayavani.net/bride-leaves-from-marriage-hall/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
