ಚಂಡೀಗಢ:ಪ್ರೀತಿಯಿಂದ ಸಾಕಬೇಕಿದ್ದ ಅಪ್ಪನೇ ತನ್ನ ಅಪ್ರಾಪ್ತ ಮಗಳ ಮೇಲೆ ಏಳು ವರ್ಷಗಳ ಕಾಲ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಹರಿಯಾಣದಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಮಗಳೇ ಇದೀಗ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ತನ್ನ ಮೇಲಾದ ದೌರ್ಜನ್ಯದ ಕಥೆಯನ್ನು ಬಿಚ್ಚಿಟ್ಟಿದ್ದಾಳೆ.
ಇದನ್ನೂ ಓದಿ:ಅಕ್ಕನ ಗಂಡನನ್ನೇ ಗುಂಡಿಕ್ಕಿ ಕೊಂದ ಬಾಮೈದುನ! 48 ತಾಸಿನಲ್ಲೇ ಬಯಲಾಯ್ತು ಕೊಲೆ ರಹಸ್ಯ
ಹಿಸಾರ್​ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. 17 ವರ್ಷದ ಬಾಲಕಿ ಹಿಸಾರ್​ನ ಮಹಿಳಾ ಪೊಲೀಸ್​ ಠಾಣೆಯಲ್ಲಿ ಈ ವಿಚಾರವಾಗಿ ದೂರು ನೀಡಿದ್ದಾಳೆ. ನನ್ನ ಅಪ್ಪ ಏಳು ವರ್ಷಗಳಿಂದ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ನಾನು ಹಲವು ಬಾರಿ ಗರ್ಭವತಿ ಆಗಿದ್ದೆ. ಆಗೆಲ್ಲ ಬಲವಂತವಾಗಿ ಎಳೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಆತನ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಸುತ್ತಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ. ನಾನು ಮಾತ್ರವಲ್ಲ, ನನ್ನ 11 ವರ್ಷದ ತಂಗಿಗೂ ಆತ ಲೈಂಗಿಕ ಕಿರುಕುಳ ನೀಡುತ್ತಾನೆ ಎಂದು ಬಾಲಕಿ ಹೇಳಿದ್ದಾಳೆ.
ಇದನ್ನೂ ಓದಿ:ನೀನು ಮಗುವಲ್ಲ ಕುರಿ ಎಂದು 8 ತಿಂಗಳ ಮಗುವನ್ನು ಕೊಡಲಿಯಲ್ಲಿ ಕೊಚ್ಚಿ ಕೊಂದ ಅಮ್ಮ!
ಇದೀಗ ಬಾಲಕಿಯ ತಂದೆಯ ಮೇಲೆ ಐಪಿಸಿ ಸಿಕ್ಷನ್​ 376 (2) (ಪುನರಾವರ್ತಿತ ಅತ್ಯಾಚಾರ), 376 (2) ಎಫ್ (ರಕ್ಷಕರಿಂದ ಅತ್ಯಾಚಾರ), 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗುತ್ತದೆ), 506 (ಕ್ರಿಮಿನಲ್ ಬೆದರಿಕೆ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 354-ಎ (1) (ಲೈಂಗಿಕ ಮಾತುಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲದೆ ಪೊಕ್ಸೊ ಕಾಯ್ದೆಯಡಿಯಲ್ಲೂ ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್​)
ಕರೊನಾ ಲಸಿಕೆ ಪಡೆದ ವಾರ್ಡ್ ಬಾಯ್​ ಸಾವು! ಕುಟುಂಬ, ಆರೋಗ್ಯ ಇಲಾಖೆ ಹೇಳಿದ್ದೇನು?

ಗರ್ಭಿಣಿಯಾದಾಗ ಎಲ್ಲವೂ ಸರಿಯಾಗುತ್ತದೆ- ಗಾತ್ರದ ಬಗ್ಗೆ ಮುಜುಗರ ಬೇಡ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
