ಲಖನೌ:ಪೊಲೀಸ್​ ಠಾಣೆಯೊಳಗೆ ಕುಳಿತು ವ್ಯಕ್ತಿ ಒಬ್ಬ ಮದ್ಯಪಾನ ಮಾಡುತ್ತಿರುವ ಘಟನೆ ಉತ್ತರಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ.
ಆರೋಪಿ ಮದ್ಯಪಾನ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ನೆಟ್ಟಿ್ಗರು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.
ಸಹರಾನ್​ಪುರದ ಖಾತಾ ಖೇರಿ ಪೊಲೀಸ್​ ಠಾಣೆಯಲ್ಲಿ ಘಟನೆ ನಡೆದಿದ್ದು ಇದೆ ಸಂಬಂಧ ಆರೋಪಿ ಇಮ್ರಾನ್​ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತ ಆರೋಪಿ ಇಮ್ರಾನ್​ ಠಾಣಾಧಿಕಾರಿ ಕುರ್ಚಿಯಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿರುವುದು ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಕಂಡು ಬರುತ್ತದೆ.
ಇದನ್ನೂ ಓದಿ:ಲೈಸೆನ್ಸ್​ ಇಲ್ಲದೆ ವಾಹನ ಚಾಲನೆ; 5 ದಶಕಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ!
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಪಿನ್​ ತಾಡಾ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಇಮ್ರಾನ್​ನನ್ನು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಕರ್ತವ್ಯ ಲೋಪ ಎಸಗಿದ ಕಾರಣ ಖಾತಾ ಖೇರಿ ಪೊಲೀಸ್​ ಠಾಣಾಧಿಕಾರಿ ಸಚಿನ್​ ತ್ಯಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 18 =
Remember me
